ಸೆ.29ರಂದು ಕೈಗಾರಿಕೋದ್ಯಮಿಗಳಿಗೆ ಒಂದು ದಿನದ ಜಾಗೃತಿ ಕಾರ್ಯಕ್ರಮ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ತಾಂತ್ರಿಕ ಸಲಹಾ ಸಂಸ್ಥೆ (ಟೆಕ್ಸಾಕ್) ಸಂಯುಕ್ತಾಶ್ರಯದಲ್ಲಿ ಇದೇ ಸೆ.29ರಂದು ಬೆಳಿಗ್ಗೆ 10.30ಕ್ಕೆ
ನಗರದ ದುರ್ಗದ ಸಿರಿ ಹೋಟೆಲ್‍ನಲ್ಲಿ ESM Workshop ಹಾಗೂ TreDs ಕುರಿತಂತೆ ಕೈಗಾರಿಕೋದ್ಯಮಿಗಳಿಗೆ ಇಲಾಖೆಯಿಂದ ದೊರೆಕುವ ಸೌಲಭ್ಯಗಳ ಬಗ್ಗೆ ಒಂದು ದಿನದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಕೈಗಾರಿಕೋದ್ಯಮಿಗಳು ಪಾಲ್ಗೊಂಡು ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಬಿ.ಆನಂದ್ ತಿಳಿಸಿದ್ದಾರೆ.

