ಮಹಿಳಾ ನೌಕರರಿಗೆ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿವಿಧ ಕಾರ್ಮಿಕ ಕಾಯ್ದೆಗಳ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೈಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯವನ್ನು ಉದ್ಯೋಗದಾತರು ಒದಗಿಸಬೇಕು ಎಂದು ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಅ.ಶಿಂದಿಹಟ್ಟಿ ತಿಳಿಸಿದ್ದಾರೆ.

ಕಾರ್ಖಾನೆಗಳ ಕಾಯ್ದೆ 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961, ತೋಟ ಕಾರ್ಮಿಕರ ಕಾಯ್ದೆ 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ 1966 ಮತ್ತು ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ 1961ರಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಅವರ ಋತುಚಕ್ರದ ಸಮಯದಲ್ಲಿ ಪ್ರತಿ ಮಾಸಿಕ ಒಂದು ದಿನದ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದೆ.

- Advertisement - 

ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಮತ್ತು ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರ ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಕಲಬುರಗಿ ಪ್ರಾದೇಶಿಕ ವಿಭಾಗದ ಉಪ ಕಾರ್ಮಿಕ ಆಯುಕ್ತ ಡಾ.ವೆಂಕಟೇಶ ಅ.ಶಿಂದಿಹಟ್ಟಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";