ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್ಲೈನ್ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ  ಆಹ್ವಾನಿಸಲಾಗಿದೆ.

- Advertisement - 

ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಕೋರಿ ಅರ್ಹ ವಿದ್ಯಾರ್ಥಿಗಳು HMIS ಆನ್ಲೈನ್ ಪೋರ್ಟಲ್ನಲ್ಲಿ  ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ HMIS ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಲು ಅನಾನುಕೂಲವಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು Manual ಮುಖೇನ ಪ್ರವೇಶ ಪಡೆಯಲು ಹತ್ತಿರವಿರುವ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಭೇಟಿಯಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 30 ರ ಕೊನೆಯ ದಿನವಾಗಿರುತ್ತದೆ.

- Advertisement - 

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.2017, 2ನೇ ಮಹಡಿ, ಜಿಲ್ಲಾಡಳಿತ ಭವನ, ವೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗ್ರಾಜಿಲ್ಲೆ-562110, ದೂರವಾಣಿ ಸಂಖ್ಯೆ:080-29787447/9480843020, ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು-080-27681784, ದೊಡ್ಡಬಳ್ಳಾಪುರ-080-27623681, ಹೊಸಕೋಟೆ-080-27931528, ನೆಲಮಂಗಲ-080-27723172 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";