ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ಸೇನೆಯು 2027ರ ನೇಮಕಾತಿ ವರ್ಷಕ್ಕಾಗಿ ಅಗ್ನಿಪಥ್ ಯೋಜನೆಯಡಿ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಅಇಇ) ಆನ್ಲೈನ್ ನೋಂದಣಿಯನ್ನು ಅಧಿಕೃತವಾಗಿ ಘೋಷಿಸಿದೆ. ಕರ್ನಾಟಕದ ಎಲ್ಲಾ ಜಿಲ್ಲೆಗಳ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ನೋಂದಣಿ ಅವಧಿಯು 13 ಫೆಬ್ರವರಿ 2026 ರಿಂದ 01 ಏಪ್ರಿಲ್ 2026 ರವರೆಗೆ ನಡೆಯಲಿದೆ. ಲಭ್ಯವಿರುವ ವಿಭಾಗಗಳು: ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಆಫೀಸ್ ಅಸಿಸ್ಟೆಂಟ್/ಸ್ಟೋರ್ ಕೀಪರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ಮನ್ (10ನೇ ಮತ್ತು 8ನೇ ತೇರ್ಗಡೆ), ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್), ನರ್ಸಿಂಗ್ ಅಸಿಸ್ಟೆಂಟ್ ಮತ್ತು ನರ್ಸಿಂಗ್ ಅಸಿಸ್ಟೆಂಟ್ ವೆಟರಿನರಿ, ಸಿಪಾಯಿ ಫಾರ್ಮಾ.
ಆಸಕ್ತ ಅಭ್ಯರ್ಥಿಗಳು ಭಾರತೀಯ ಸೇನೆಯ ಅಧಿಕೃತ ವೆಬ್ಸೈಟ್ www.joinindianarmy.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು.
ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳ ಬಗ್ಗೆ ವಿವರವಾದ ಮಾಹಿತಿಯು ವೆಬ್ಸೈಟ್ನಲ್ಲಿ ಲಭ್ಯವಿದೆ.
ನೋಂದಣಿ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಗಳಿದ್ದಲ್ಲಿ, ಅಭ್ಯರ್ಥಿಗಳು ನೇಮಕಾತಿ ಕಚೇರಿ ಬೆಂಗಳೂರು: 080-29516517 / 7996672666, ಪ್ರಾದೇಶಿಕ ನೇಮಕಾತಿ ಕಚೇರಿ ಮಂಗಳೂರು: 082-42951276 / 7411497644, ಪ್ರಾದೇಶಿಕ ನೇಮಕಾತಿ ಕಚೇರಿ ಬೆಳಗಾವಿ: 0831-2950001 / 7411048362 ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

