ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಷ್ಟಪಡಿಸಿದ್ದಾರೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು ಎಂದು ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬಡ ಕುಟುಂಬದವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಎಚ್ಚರಿಸಿದ್ದಾರೆ.