ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆಯಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು ರೈತರ ನೆರವಿಗೆ ಧಾವಿಸಬೇಕು ಎಂದು ಈಗಾಗಲೇ ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯ ಮಾಡಿದ್ದರೂ ಅತ್ತ ಗಮನ ಹರಿಸದ ರಾಜ್ಯ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ದೂರಿದ್ದಾರೆ.

ಸಿಎಂ ಸಿದ್ದರಾಮಯ್ಯ ನವರೇ, ತಮ್ಮ ಡಿನ್ನರ್ ಮೀಟಿಂಗ್ ಗಳು, ಔತಣಕೂಟಗಳು, ರಾಜಕೀಯ ಮೇಲಾಟಗಳು ಮುಗಿದಿದ್ದರೆ ಸ್ವಲ್ಪ ರೈತರ ಸಮಸ್ಯೆಗಳತ್ತ ಗಮನ ಹರಿಸುವ ದೊಡ್ಡ ಮನಸ್ಸು ಮಾಡಿ. ತಮಗೆ ಬಿಡುವಿಲ್ಲದಿದ್ದರೆ ಕನಿಷ್ಠ ಪಕ್ಷ ಕೃಷಿ ಸಚಿವ ಚಲುವನಾರಾಯಣಸ್ವಾಮಿ ಅವರಿಗದರೂ ಅವರು ಕೃಷಿ ಸಚಿವರು ಎನ್ನುವುದನ್ನ ಒಮ್ಮೆ ನೆನಪು ಮಾಡಿ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.

ಇನ್ನು 24 ಗಂಟೆಯೊಳಗೆ ಭತ್ತ ಮತ್ತು ತೊಗರಿ ಖರೀದಿ ಕೇಂದ್ರಗಳನ್ನು ತೆರೆದು, ಖರೀದಿ ಆರಂಭಿಸದಿದ್ದರೆ ರೈತ ಸಂಪರ್ಕ ಕೇಂದ್ರಗಳಿಗೆ ಬೀಗ ಜಡಿದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಅಶೋಕ್ ಎಚ್ಚರಿಕೆ ನೀಡಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";