ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಯೋಜನೆಯಡಿ 2025-26ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳ ಮೊದಲನೇ ಸೆಮಿಸ್ಟರ್ ಪರೀಕ್ಷೆಯ ಅಧಿಸೂಚನೆ ಹೊರಡಿಸಲಾಗಿದೆ. ಸದರಿ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಪರೀಕ್ಷಾ ಅರ್ಜಿಯಲ್ಲಿ ಪರೀಕ್ಷಾ ಕೇಂದ್ರದ ಹೆಸರು ಹಾಗೂ ವಿವರ ಭರ್ತಿ ಮಾಡಲು ಸೂಚಿಸಿದೆ. ಆದರೆ ಪರೀಕ್ಷಾ ಶುಲ್ಕ ಪಾವತಿ ಮಾಡುವ ಅಗತ್ಯವಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

