ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಕೆಲವೊಂದು ಅಭ್ಯರ್ಥಿಗಳು ನಿಗದಿತ ದಿನಾಂಕಗಳಂದು ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗಿರುವುದಿಲ್ಲ.
ಈ ಹಿನ್ನಲೆಯಲ್ಲಿ ಅಂತಿಮವಾಗಿ ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಕಲ್ಪಿಸಲು ನವೆಂಬರ್ 7 ರಿಂದ 11 ರವರೆಗೆ ಭಾನುವಾರ ಹೊರತುಪಡಿಸಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುತ್ತದೆ.
ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 18-09-2024 ರಿಂದ ನಡೆಸಲಾಗುತ್ತಿದೆ.
ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು ಎಸ್. ಎಂ.ಎಸ್ ಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್-ಸೈಟ್‍ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿ ನೀಡಲಾಗಿತ್ತು.
ಸದರಿ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್-ಸೈಟ್ ಮೂಲಕ ಕರೆಪತ್ರ ಡೌನ್ ಲೋಡ್ ಮಾಡಿಕೊಂಡು ತಮಗೆ ನಿಗಧಿಪಡಿಸಿರುವ ದಿನಾಂಕದಂದು ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಸದರಿ ಅವಕಾಶವನ್ನು ಉಪಯೋಗಿಸಿಕೊಳ್ಳಲು ಸೂಚಿಸಲಾಗಿದೆ.
ಹುಮ್ನಾಬಾದ್ ಚಾಲನಾ ಪಥವನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ಈ ಅವಕಾಶವು ಅಂತಿಮ ಅವಕಾಶವಾಗಿದ್ದು, ತದನಂತರದಲ್ಲಿ ಹುಮ್ನಾಬಾದ್ ಚಾಲನಾ ಪಥದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಅವಕಾಶವಿರುವುದಿಲ್ಲ ಎಂಬುದನ್ನು ಕರ್ನಾಟಕ ರಾಜ್ಯ ಸಾರಿಗೆ ನಿಗಮದ ಆಯ್ಕೆ ಸಮಿತಿ ನಿರ್ದೇಶಕರು ಹಾಗೂ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.