ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಕ್ಷೇತ್ರದ ಅನುದಾನಕ್ಕಾಗಿ ವಿಪಕ್ಷದ ಶಾಸಕರು ತಾಳ್ಮೆಯಿಂದ ಕಾಯಬೇಕು ಎಂದರೆ ಏನು ಸ್ವಾಮಿ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ತಾವು ಈ ಮೊದಲೇ ಹೇಳಿರುವಂತೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎನ್ನುವುದು ನಿಮ್ಮ ಮಾತಿನ ಅರ್ಥಾನಾ? ಅಥವಾ ತಾಳ್ಮೆಯಿಂದ ಇರದಿದ್ದರೆ ನಟ್ಟು-ಬೋಲ್ಟು ಟೈಟು ಮಾಡುತ್ತೇನೆ ಎನ್ನುವ ಧಮ್ಕಿನಾ?
ತಮಗೆ ಇಷ್ಟ ಬಂದ ಹಾಗೆ ಬರೀ ಕಾಂಗ್ರೆಸ್ ಶಾಸಕರಿಗೆ ಮಾತ್ರ ಅನುದಾನ ಕೊಡೋಕೆ ರಾಜ್ಯ ಸರ್ಕಾರದ ಖಜಾನೆ ನಿಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷದ ಪಾರ್ಟಿ ಫಂಡ್ ಅಲ್ಲ ಡಿ.ಕೆ.ಶಿವಕುಮಾರ್ ಅವರೇ, ಅದು ಆರೂವರೆ ಕೋಟಿ ಕನ್ನಡಿಗರ ಬೆವರಿನ ತೆರಿಗೆ ಹಣ.
ಈ ಮಲತಾಯಿ ದೋರಣೆ ನಿಲ್ಲಿಸಿ, ಎಲ್ಲಾ ಕ್ಷೇತ್ರಗಳಿಗೂ ಅನುದಾನ ಬಿಡುಗಡೆ ಮಾಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ ಮಾಡಿದ್ದಾರೆ.