ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವದೆಹಲಿಯಲ್ಲಿ ಬುಧವಾರ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಿಪಕ್ಷ ನಾಯಕ ಆರ್.ಅಶೋಕ್ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಭೇಟಿ ಸಂದರ್ಭದಲ್ಲಿ ಇತ್ತೀಚಿನ ರಾಜಕೀಯ ಘಟನಾವಳಿಗಳು, ಮುಂಬರುವ ಚುನಾವಣೆಗಳು ಸೇರಿದಂತೆ ಮತ್ತಿತರ ವಿಚಾರಗಳ ಕುರಿತು ನಾಯಕರು ಗಂಭೀರ ಚರ್ಚೆ ನಡೆಸಿದರು ಎನ್ನಲಾಗಿದೆ.

