ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿವೆ-ಸಿಎಂ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ಹೇಳಿದ್ದಾರೆ.

ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ ಎಂದು ಸಿಎಂ ತಿಳಿಸಿದ್ದಾರೆ.

ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೇ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ ಎಂದು ಸಿಎಂ ನೋವು ತೋಡಿಕೊಂಡಿದ್ದಾರೆ.

ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";