ಕರ್ನಾಟಕ ದೇವಸ್ಥಾನಗಳಲ್ಲಿ ನಂದಿನಿ ತುಪ್ಪ ಬಳಸಲು ಆದೇಶ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತಿರುಪತಿ ಪ್ರಸಾದ ಲಡ್ಡುವಿನಲ್ಲಿ ದನದ ಕೊಬ್ಬಿನ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕದ ದೇವಸ್ಥಾನಗಳಿಗೆ ಹೊಸ ಆದೇಶ ಹೊರಡಿಸಲಾಗಿದೆ.

ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಶುದ್ಧ ನಂದಿನಿ ತುಪ್ಪ ಬಳಸುವಂತೆ ಆದೇಶ ಹೊರಡಿಸಲಾಗಿದೆ.ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಇದು ಅನ್ವಯವಾಗಲಿದೆ.

ದೇವಾಲಯಗಳಲ್ಲಿ ನಂದಿನಿ ತುಪ್ಪ ಮಾತ್ರ ಬಳಸುವಂತೆ‌ಆದೇಶಿಸಲಾಗಿದೆ. ದೇವಸ್ಥಾನ ದೀಪಗಳಿಗೆ, ಪ್ರಸಾದ ತಯಾರಿಕೆ, ದಾಸೋಹ ಭವನದಲ್ಲಿ ನಂದಿನಿ ತುಪ್ಪ ಬಳಸಬೇಕು ಎಂದು ಸೂಚನೆ ನೀಡಲಾಗಿದೆ. ದೇವಾಲಯಗಳಲ್ಲಿ ತಯಾರಿಸುವ ಪ್ರಸಾದದ ಗುಣಮಟ್ಟ ಕಾಪಾಡುವಂತೆ ಎಚ್ಚರಿಕೆ ನೀಡಲಾಗಿದೆ.

- Advertisement -  - Advertisement - 
Share This Article
error: Content is protected !!
";