ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೇಂದ್ರ ಸರ್ಕಾರದ ದ್ವೇಷ ರಾಜಕಾರಣಕ್ಕೆ ನಮ್ಮ ಧಿಕ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪಕ್ಷದ ನಾಯಕರು, ಸಿಎಂ-ಡಿಸಿಎಂ ಅವರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಈ ಪ್ರತಿಭಟನೆಯಲ್ಲಿ ಸಿಎಂ, ನಾನು, ನಮ್ಮ ಸಚಿವರು ಭಾಗವಹಿಸುದ್ದು ನಂತರ ಸದನದಲ್ಲೂ ನಾವು ಈ ಕುರಿತು ಚರ್ಚೆ ಮಾಡುತ್ತೇವೆ. ಬೆಂಗಳೂರಿನ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಶನಿವಾರ ಪ್ರತ್ಯೇಕ ಕಾರ್ಯಕ್ರಮ ರೂಪಿಸುತ್ತೇವೆ. ಪಕ್ಷದ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಹೋರಾಟದಲ್ಲಿ ಭಾಗವಹಿಸಬೇಕೆಂದು ಡಿಕೆ ಶಿವಕುಮಾರ್ ಕೋರಿದ್ದಾರೆ.

