ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ದಕ್ಷಿಣದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ!ವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ ನೀಡಿದರು.
ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನಲ್ಲಿ ಎಸ್. ಕರಿಯಪ್ಪ ಕೃಷಿ ಮಹಾವಿದ್ಯಾಲಯದ ಶಂಕುಸ್ಥಾಪನೆ ನೆರವೇರಿಸಿ, ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಕನಕಪುರದ ಗಾಂಧಿ ಎಂದೇ ಹೆಸರುವಾಸಿಯಾಗಿರುವ ಎಸ್.ಕರಿಯಪ್ಪನವರು ‘ದಿ ರೂರಲ್ ಎಜುಕೇಷನ್ ಸೊಸೈಟಿ‘ ವಿದ್ಯಾಸಂಸ್ಥೆ ಕಟ್ಟಿ, ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ. ನಾವೆಲ್ಲರೂ ದಿ. ಕರಿಯಪ್ಪನವರನ್ನು ಸ್ಮರಿಸಿಕೊಂಡು ಅವರ ಋಣವನ್ನು ತೀರಿಸುವ ಕೆಲಸವನ್ನು ಮಾಡುತ್ತಿದ್ದೇವೆ.
ಜಿಲ್ಲೆಯ ಹೆಸರು ಇದೀಗ ಬೆಂಗಳೂರು ದಕ್ಷಿಣ ಆಗಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದೇವೆ. ಶಿಕ್ಷಣ ಕ್ಷೇತ್ರದಲ್ಲೂ ಮಹತ್ತರವಾದ ಬದಲಾವಣೆಗಳನ್ನು ತರುತ್ತಿದ್ದೇವೆ ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.