ಸರ್ಕಾರಿ ಶಾಲಾ ದಾಖಲಾತಿ ಹೆಚ್ಚಳಕ್ಕೆ “ನಮ್ಮ ಶಾಲೆ ನಮ್ಮ ಜವಾಬ್ದಾರಿ”

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಮಲ್ಲಾಪುರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಮ್ಮ ಶಾಲೆ ನಮ್ಮ ಜವಾಬ್ದಾರಿಎಂಬ ಕಾರ್ಯಕ್ರಮದ ಮೂಲಕ ಸಮುದಾಯದಲ್ಲಿ ಜಾಗೃತಿ ಮೂಡಿಸಿ, ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ಪ್ರಯತ್ನ ನಿರ್ವಹಿಸಲಾಯಿತು.

ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಪರಿಕಲ್ಪನೆ, ಉದ್ದೇಶ ಮತ್ತು ಇಲಾಖೆಯ ಆಶಯದೊಂದಿಗೆ ಸರ್ಕಾರಿ ಶಾಲೆಯಲ್ಲಿ ಒದಗಿಸುತ್ತಿರುವ ಪ್ರೋತ್ಸಾಹದಾಯಕ ಶೈಕ್ಷಣಿಕ ಸೌಲಭ್ಯಗಳನ್ನು ಪೋಷಕರಿಗೆ ಮನವರಿಕೆ ಮಾಡಿದರು. ಜೊತೆಯಲ್ಲಿ ತಾಲ್ಲೂಕಿನ ಶಿಕ್ಷಕರಿಗೆ, ಮಕ್ಕಳ ಕಲಿಕಾ ಗುಣಮಟ್ಟ ಉತ್ತಮ ಪಡಿಸಲು ಸರ್ಕಾರ ಕೈಗೊಂಡ ಹಲವು ಯೋಜನೆಗಳನ್ನು ಫಲಪ್ರದವಾಗಿ ಅನುಷ್ಠಾನಗೊಳಿಸಲು ತಿಳಿಸಿದರು.

ಪೋಷಕರೊಂದಿಗಿನ ಸಂವಾದದಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ಭಾಗಿದಾರರೊಂದಿಗೆ ಚರ್ಚಿಸಿ ಜಾಗೃತಿ ಮೂಡಿಸಿದರು.
ಹಿರಿಯ ಉಪನ್ಯಾಸಕರಾದ ಅಶ್ವಥ್ ನಾರಾಯಣ್ ಮಾತನಾಡಿ, ಸರ್ಕಾರಿ ಶಾಲೆಗಳ ಮೇಲಿನ ಅಸಡ್ಡೆ ಬಿಟ್ಟು ಅಲ್ಲಿರುವ ಉತ್ಕøಷ್ಟ ಮಾನವ ಸಂಪನ್ಮೂಲ, ಸೌಲಭ್ಯಗಳನ್ನು ಬಳಸಿಕೊಂಡು ಉತ್ತಮ ವ್ಯಕ್ತಿತ್ವ ನಿರೂಪಣೆಗೆ ಕರೆ ನೀಡಿದರು.
ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್ ಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕಲಿಕಾ ಗುಣಮಟ್ಟ ಉತ್ತಮ ಪಡಿಸಲು ಶಿಕ್ಷಣ ಇಲಾಖೆಯ ಹಲವಾರು ಯೋಜನೆಗಳನ್ನು ಪೋಷಕರು ತಮ್ಮ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಸರ್ಕಾರಿ ಶಾಲೆಗಳತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಇಡಲು ಕರೆಕೊಟ್ಟರು.

ಮಧ್ಯಾಹ್ನ ಬಿಸಿಊಟದ ಸಹಾಯಕ ನಿರ್ದೇಶಕರಾದ ಗುರುರಾಜ್ ಮಾತನಾಡಿ, ಮಧ್ಯಾಹ್ನ ಬಿಸಿ ಊಟ ಯೋಜನೆಯಡಿ ವಿತರಿಸುವ ಬಿಸಿ ಊಟದ ಗುಣಮಟ್ಟದ ಬಗ್ಗೆ ಜಾಗೃತಿ ಮೂಡಿಸಿ ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ರಕ್ತ ಹೀನತೆ ನಿವಾರಣೆಗೆ ಸರ್ಕಾರಿ ಶಾಲೆಗಳಲ್ಲಿ ನೀಡುತ್ತಿರುವ ಪೌಷ್ಠಿಕ ಬೆಂಬಲದ ಬಗ್ಗೆ ಫೋಷಕರಲ್ಲಿ ಅರಿವು ಮೂಡಿಸಿ ವಿದ್ಯಾರ್ಥಿಗಳನ್ನು ಸರಕಾರಿ ಶಾಲೆಗಳಲ್ಲಿ ದಾಖಲಿಸಲು ಪ್ರೇರೇಪಿಸಿದರು.

 ಗ್ರಾಮ ಪಂಚಾಯಿತಿ ಸದಸ್ಯರು, ಸಹಕಾರ ಪತ್ತಿನ ಸಂಘದ ಅಧ್ಯಕ್ಷರು ಶಾಲಾ ಅಭಿವೃದ್ಧಿಗೆ ಗ್ರಾಮದ ಸಹಕಾರ ಸದಾ ಇರುವುದಾಗಿ ತಿಳಿಸಿದರು. ದಾಖಲಾತಿ ಹೆಚ್ಚಿಸಲು ತಾವು ಕೂಡ ಶ್ರಮಿಸಲು ಉತ್ಸುಕರಾಗಿ ಮಾತನಾಡಿದರು.
ಮಲ್ಲಾಪುರ ಶಾಲೆಯ ಮುಖ್ಯ ಶಿಕ್ಷಕರಾದ ರತ್ನಮ್ಮ ಮತ್ತು ಶಿಕ್ಷಕ ವೃಂದದವರ ಸಹಕಾರದೊಂದಿಗೆ ಇಲಾಖೆಯ ಕಾರ್ಯಕ್ರಮದ ನಿರೂಪಣೆಯನ್ನು ಶಿಲ್ಪ ನಿರ್ವಹಿಸಿದರೆ, ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.

ಕಾರ್ಯಕ್ರಮದಲ್ಲಿ ಇಲಾಖೆಯ .ಸಿ., ಬಿ.ಆರ್.ಪಿ, ಸಿ.ಆರ್.ಪಿಗಳು ಭಾಗಿಯಾದರು ಮತ್ತು ಪೋಷಕರು, ಎಸ್.ಡಿ.ಎಂಸಿ ಸದಸ್ಯರು, ಅಡುಗೆ ಸಿಬ್ಬಂದಿಯವರು, ಹಳೇ ವಿದ್ಯಾರ್ಥಿಗಳು, ಹತ್ತಿರದ ಎಲ್ಲಾ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಭಾಗವಹಿಸಿದರು.

ಅಜೀಂ ಪ್ರೇಮ್ ಜೀ ಫೌಂಡೇಶನ್ ಸಂಸ್ಥೆಯ (ಎಪಿಎಫ್) ಪ್ರತಿನಿಧಿಗಳು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಮೀಕ್ಷಾ ಹಾಳೆಯೊಂದಿಗೆ ಪೋಷಕರಿಂದ ಮಾಹಿತಿಯನ್ನು ಪಡೆದುಕೊಂಡರು ಕಾರ್ಯಕ್ರಮದ ಕೊನೆಯಲ್ಲಿ ಭಾಗಿದಾರರಿಂದ ಹಿಮ್ಮಾಯಿತಿ ಅಭಿಪ್ರಾಯ. ಸಲಹೆಗಳನ್ನುಪಡೆದರು. ಸಲೀಮಾ ವಂದಿಸಿದರು.

 

Share This Article
error: Content is protected !!
";