ಸಾಮಾಜಿಕ ಪ್ರಗತಿಯತ್ತ ನಮ್ಮ ಹೆಜ್ಜೆ-ಡಿಕೆ ಶಿವಕುಮಾರ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ಸರ್ಕಾರ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಹಿಂದುಳಿದ ವರ್ಗಗಳ ಆಯೋಗದಿಂದ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ರಾಜ್ಯದಲ್ಲಿ 2 ಕೋಟಿ ಮನೆಗಳ ಅಂದಾಜು 7 ಕೋಟಿ ಜನರ ಬಗ್ಗೆ ಸಮೀಕ್ಷೆ ನಡೆಯಲಿದ್ದು, ಇದರ ಭಾಗವಾಗಿ ಈಗಾಗಲೇ 1.55 ಕೋಟಿ ಮನೆಗಳಿಗೆ ಸ್ಟಿಕ್ಕರ್‌ಅಂಟಿಸಲಾಗಿದೆ. ಈ ಸಮೀಕ್ಷೆಯಲ್ಲಿ 16 ಪ್ರಶ್ನೆಗಳನ್ನು ಕೇಳಲಾಗುತ್ತಿದ್ದು,

- Advertisement - 

ಸಮಾಜದ ಪ್ರತಿಯೊಂದು ವರ್ಗದ ಬಗ್ಗೆ ಮಾಹಿತಿ ಪಡೆದು ಇನ್ನೂ ಹೆಚ್ಚು ಅಭಿವೃದ್ಧಿ ಪರವಾದ ಯೋಜನೆಗಳನ್ನು ಜಾರಿಗೊಳಿಸಲು ಸಮೀಕ್ಷೆ ಸಹಕಾರಿಯಾಗಲಿದೆ. ಹೀಗಾಗಿ ನಾಡಿನ ಪ್ರತಿಯೊಬ್ಬ ನಾಗರೀಕರು ತಪ್ಪದೇ ಸಮೀಕ್ಷೆಯಲ್ಲಿ ಭಾಗಿಯಾಗಬೇಕೆಂದು ಡಿಸಿಎಂ ಶಿವಕುಮಾರ್ ಮನವಿ ಮಾಡಿದರು.

 

- Advertisement - 

 

Share This Article
error: Content is protected !!
";