ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಸಂಪೂರ್ಣವಾಗಿ ಕುಸಿದಿರುವ ಕಾನೂನು-ಸುವ್ಯವಸ್ಥೆ ಖಂಡಿಸಿ, ಕರ್ನಾಟಕ ಕಾಂಗ್ರೆಸ್ ಶಾಸಕರ ಗೂಂಡಾಗಿರಿ ಹಾಗೂ ರಾಜ್ಯದಲ್ಲಿ ಕುಸಿದಿರುವ ಕಾನೂನು ಸುವ್ಯವಸ್ಥೆ ವಿರುದ್ಧ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನಾ ಸಮಾವೇಶ ನಡೆಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಈ ಭ್ರಷ್ಟ ಹಾಗೂ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಾಪಕವಾಗಿದ್ದು, ನಮ್ಮ ಪಕ್ಷದ ಶಾಸಕರ ಹತ್ಯೆ ಯತ್ನ, ಅವರ ನಿವಾಸದ ಮೇಲೆ ಹಲ್ಲೆ, ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಕೊಲೆಗೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಅವರು ಎಚ್ಚರಿಸಿದರು.
ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖಮಂತ್ರಿ, ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ.ಶ್ರೀರಾಮುಲು, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕ ಜನಾರ್ದನರೆಡ್ಡಿ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ ಸೇರಿದಂತೆ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.

