ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಹೆಚ್‌ಡಿಕೆ ಕಂಬನಿ
ಚAದ್ರವಳ್ಳಿ ನ್ಯೂಸ್, ಬೆಂಗಳೂರು
ಹಾಲಕ್ಕಿ ಹಾಡುಗಳ ಕೋಗಿಲೆ, ಪದ್ಮಶ್ರೀ ಪುರಸ್ಕೃತರು ಹಾಗೂ ಸುಕ್ರಜ್ಜಿ ಎಂದೇ ಜನಜನಿತರಾಗಿದ್ದ ಸುಕ್ರಿ ಬೊಮ್ಮಗೌಡ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಮದ್ಯಪಾನ ವಿರೋಧಿ ಹೋರಾಟ ಸೇರಿ ಅನೇಕ ಜನಪರ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿದ್ದ ಅವರ ನಾಲಗೆಯ ಮೇಲೆ ಐದು ಸಾವಿರಕ್ಕೂ ಹೆಚ್ಚು ಹಾಲಕ್ಕಿ ಹಾಡುಗಳು ನಲಿದಾಡುತ್ತಿದ್ದವು ಎಂದು ಕೇಳಿದ್ದೇನೆ. ಅವರ ಅಗಲಿಕೆ ರಾಜ್ಯದ ಸಾಂಸ್ಕೃತಿಕ, ಜನಪದ ಲೋಕಕ್ಕೆ ಬಹುದೊಡ್ಡ ನಷ್ಟ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಅವರಿಗೆ ಸದ್ಗತಿ ಸಿಗಲಿ ಹಾಗೂ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.

