ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸದಾ ಕಾಲ ಪಾಕಿಸ್ತಾನವು ಭಾರತದೊಂದಿಗೆ ಕಾಲು ಕೆದರಿಕೊಂಡು ಜಗಳಕ್ಕೆ ಬರುತ್ತಿದ್ದು ತನ್ನ ತಪ್ಪಿಗೆ ತಕ್ಕ ಪ್ರಾಯಶ್ಚಿತ ಅನುಭವಿಸುತ್ತಿದೆ.
ಪಾಕಿಸ್ತಾನದ ರಾವಲ್ಪಿಂಡಿ, ಲಾಹೋರ್, ಕರಾಚಿ ಮತ್ತು ಇಸ್ಲಾಮಾಬಾದ್ ನಗರಗಳ ಮೇಲೆ ಭಾರತೀಯ ಸೇನೆ ಡ್ರೋನ್ ಗಳ ಮೂಲಕ ದಾಳಿ ನಡೆಸಿದೆ. ಪಾಕಿಸ್ತಾನದ ನಗರಗಳ ಮೇಲೆ ಭಾರತ 75 ವರ್ಷಗಳಲ್ಲಿ ಮೊದಲ ಬಾರಿಗೆ ಆಕ್ರಮಣ ನಡೆಸಿದೆ.
ಅದರೆ, ನಗರಪ್ರದೇಶಗಳ ಯಾವುದೇ ನಾಗರಿಕ ನೆಲೆಗಳ ಮೇಲೆ ಭಾರತ ದಾಳಿ ನಡೆಸಿಲ್ಲವೆಂದು ಸೇನಾಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. ಭಾರತ ನಡೆಸಿರುವ ಆಕ್ರಮಣದ ಬಗ್ಗೆ ಮೇಲಿಂದ ಮೇಲೆ ಅಪ್ಡೇಟ್ ಗಳು ಬರುತ್ತಲೇ ಇವೆ.
ಪಾಕಿಸ್ತಾನದ ಪ್ರಧಾನ ಮಂತ್ರಿ ಶಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಬಂಕರ್ ಗಳಲ್ಲಿ ಆಶ್ರಯ ಪಡೆದಿರುವ ಮಾಹಿತಿ ಲಭ್ಯವಾಗಿದೆ.