ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೃಹ ಸಚಿವ ಪರಮೇಶ್ವರ್‌ಯಾವ ಗ್ರಹದಲ್ಲಿ ಇದ್ದಾರೋ ಅವರಿಗೇ ತಿಳಿದಿಲ್ಲ. ಸರ್ಕಾರದ ಪ್ರತಿನಿಧಿಯಾಗಿದ್ದುಕೊಂಡು ಹಾದಿ ಬೀದಿಯಲ್ಲಿ ಓಡಾಡುವವರ ಹಾಗೆ ಹೇಳಿಕೆ ನೀಡುತ್ತಿದ್ದಾರೆ. ಕಾನೂನು ಸುವ್ಯವಸ್ಥೆ, ಪೊಲೀಸ್‌ವ್ಯವಸ್ಥೆಯನ್ನು ನಿಯಂತ್ರಿಸುವ ಮಹತ್ವದ ಸ್ಥಾನದಲ್ಲಿರುವ ಡಾ.ಜಿ.ಪರಮೇಶ್ವರ ಅವರು, ಅಪರಾಧ ಕೃತ್ಯಗಳನ್ನು ಸ್ವಾಭಾವಿಕ ಎಂಬ ರೀತಿಯಲ್ಲಿ ಬಿಂಬಿಸುತ್ತಿರುವುದು ರಾಜ್ಯದ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.
ಜಗತ್ತಿನ ದೃಷ್ಟಿಯನ್ನು ತನ್ನತ್ತ ಸೆಳೆದಿರುವ ಭಾರತದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿನಲ್ಲಿ ಬೀದಿ ಕಾಮಣ್ಣನೊಬ್ಬ ಮಹಿಳೆಯ ಮೇಲೆ ಎರಗಿದ್ದನ್ನು ದೊಡ್ಡ ನಗರದಲ್ಲಿ ಸಣ್ಣ ಸಣ್ಣ ಅಪರಾಧ ಸಾಮಾನ್ಯ ಎಂದು ಸಮರ್ಥಿಸಿಕೊಳ್ಳುವ ಕರ್ನಾಟಕ ಸರ್ಕಾರದ ಗೃಹ ಸಚಿವರು ಇದ್ದರೆಷ್ಟು, ಬಿಟ್ಟರೆಷ್ಟು?
ಪರಮೇಶ್ವರ್‌ಅವರೇ, ಗೃಹ ಸಚಿವರಾಗಿ ಮುಂದುವರೆಯುವ ಯಾವುದೇ ನೈತಿಕತೆಯನ್ನು ನೀವು ಉಳಿಸಿಕೊಂಡಿಲ್ಲ. ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ ಎಂದು ಬಿಜೆಪಿ ಆಗ್ರಹ ಮಾಡಿದೆ.