ಗ್ಯಾರಂಟಿ ಯೋಜನೆ ಮಾದರಿಯಲ್ಲಿ ಪ್ಯಾರಿ ದೀದಿ ಗ್ಯಾರಂಟಿ ಘೋಷಣೆ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದಲ್ಲಿ ಯಶಸ್ವಿಯಾಗಿರುವ ಕಾಂಗ್ರೆಸ್‌ಸರ್ಕಾರದ ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಹೊಸದಿಲ್ಲಿಯಲ್ಲಿ ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಕಾಂಗ್ರೆಸ್‌ನಾಯಕರೊಂದಿಗೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು.

ಈ ವೇಳೆ ಮಹಿಳೆಯರಿಗೆ ಮಾಸಿಕ 2.500 ರೂಪಾಯಿ ನೀಡಲಿರುವ ಮಹತ್ವಾಕಾಂಕ್ಷೆಯ “ಪ್ಯಾರಿ ದೀದಿ” ಯೋಜನೆಯನ್ನು ಘೋಷಿಸಲಾಯಿತು. ದಿಲ್ಲಿಯಲ್ಲಿ ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದಕೂಡಲೇ ಈ ಯೋಜನೆಯು ಅನುಷ್ಠಾನಗೊಳ್ಳಲಿದ್ದು ಕಾಂಗ್ರೆಸ್‌ಪಕ್ಷಕ್ಕೆ ಮತ ನೀಡುವಂತೆ ದಿಲ್ಲಿ ಜನತೆಯಲ್ಲಿ ಅವರು ಮನವಿ ಮಾಡಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ಪಕ್ಷ 5 ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ನುಡಿದಂತೆ ನಡೆದಿದೆ. ದಿಲ್ಲಿಯಲ್ಲೂ ಕೂಡ ಅದೇ ರೀತಿ ಇತಿಹಾಸ ಸೃಷ್ಟಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಭರವಸೆ ನೀಡಿದರು.

ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳ ಸಫಲತೆಯ ಬಳಿಕ ದೆಹಲಿಯಲ್ಲಿ ಪ್ಯಾರಿ ದೀದಿಗ್ಯಾರಂಟಿ ಘೋಷಿಸುತ್ತಿದ್ದೇವೆ. ದೆಹಲಿಯಲ್ಲೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ, ಸರ್ಕಾರ ಬಂದ ಮೊದಲ ದಿನವೇ ಮಹಿಳೆಯರಿಗೆ ಮಾಸಿಕ 2500 ರೂ. ಕೊಡುವ ಈ ಯೋಜನೆ ಜಾರಿ ಮಾಡಲಾಗುವುದು ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

ಕರ್ನಾಟಕ ಮಾದರಿಯಂತೆ ದೆಹಲಿಯಲ್ಲೂ ಗ್ಯಾರಂಟಿ ಯೋಜನೆ ಜಾರಿಯಾಗಲಿದೆ. ಕರ್ನಾಟಕದ ಗೃಹ ಲಕ್ಷ್ಮೀಮಾದರಿಯಲ್ಲಿ ದೆಹಲಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಘೋಷಣೆ ಮಾಡಿದ್ದೇವೆ. ಪ್ಯಾರಿ ದೀದಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 2,500 ರೂ.ನೀಡುವ ಯೋಜನೆ ಇದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಘೋಷಣೆ ಮಾಡಿದರು.

- Advertisement -  - Advertisement - 
Share This Article
error: Content is protected !!
";