ರಾಷ್ಟ್ರಧ್ವಜ ಎಲ್ಲೆಡೆ ರಾರಾಜಿಸಲಿ ದೇಶಭಕ್ತಿ ನಮ್ಮೆಲ್ಲರ ಬದುಕಿನ ಭಾಗವಾಗಲಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಷ್ಟ್ರಧ್ವಜ ಎಲ್ಲೆಡೆ ರಾರಾಜಿಸಲಿ ದೇಶಭಕ್ತಿ ನಮ್ಮೆಲ್ಲರ ಬದುಕಿನ ಭಾಗವಾಗಲಿ” ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ  ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ದೇಶಾದ್ಯಂತ ಬುಧವಾರದಿಂದ ಆರಂಭವಾಗಿರುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೆಂಗಳೂರಿನ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ನಿವಾಸಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ದಿನಾಚರಣೆಯ ಶುಭಕೋರಿ ಅವರ ನಿವಾಸದಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಾಭಿಮಾನದ ಈ ಮಹತ್ವದ ಅಭಿಯಾನವನ್ನು ಯಶಸ್ವಿಗೊಳಿಸಲು ಕರೆ ನೀಡಲಾಯಿತು ಎಂದು ವಿಜಯೇಂದ್ರ ತಿಳಿಸಿದ್ದಾರೆ.

- Advertisement - 

ಮನೆ ಮನೆಯಲ್ಲೂ ತ್ರಿವರ್ಣ ಧ್ವಜ-
79 ನೇ ಸ್ವಾತಂತ್ರ್ಯ ದಿನೋತ್ಸವವನ್ನು ಸಂಭ್ರಮಿಸಲು ದೇಶಾದ್ಯಂತ ನಡೆಯುತ್ತಿರುವ ಹರ್ ಘರ್ ತಿರಂಗಾಅಭಿಯಾನದ ಅಂಗವಾಗಿ ನಮ್ಮ ಮನೆಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಗೌರವ ಸಲ್ಲಿಸಲಾಯಿತು.

ಇಂದಿನಿಂದ ಆಗಸ್ಟ್ 15 ರ ವರೆಗೂ ಪ್ರತಿ ಮನೆ ಮನೆಗಳ ಮೇಲೆ ರಾಷ್ಟ್ರ ಧ್ವಜ ರಾರಾಜಿಸಲಿ, ಭಾರತದ ಹಿರಿಮೆ ವಿಶ್ವ ಭೂಪಟದಲ್ಲಿ ಮಿನುಗಲಿ.

- Advertisement - 

ಈ ಮಹತ್ವದ ಅಭಿಯಾನದಲ್ಲಿ ಭಾಗವಹಿಸುವ ಎಲ್ಲರೂ ತ್ರಿವರ್ಣ ಧ್ವಜದೊಂದಿಗೆ ಸೆಲ್ಫಿ ತೆಗೆದುಕೊಂಡು SARAL ಆ‍್ಯಪ್‌ ಮತ್ತು harghartiranga.com ನಲ್ಲಿ ಅಪ್‌ಲೋಡ್‌ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್,
OBC ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಜಿಲ್ಲಾಧ್ಯಕ್ಷ ಎಸ್.ಹರೀಶ್ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

Share This Article
error: Content is protected !!
";