ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸಂವಿಧಾನ ದಿನಾಚರಣೆಯನ್ನು ನಗರಸಭೆಯ ಕಚೇರಿಯಲ್ಲಿ ಪೌರಾಯುಕ್ತರು ಎಲ್ಲಾ ಸಿಬ್ಬಂದಿವರ್ಗದವರು ಒಟ್ಟಾಗಿ ಪ್ರತಿಜ್ಞಾ ವಿಧಿ ಮಾಡುವುದರ ಮೂಲಕ “ಭಾರತದ ಪ್ರಜೆಗಳಾದ ನಾವು ಭಾರತವನ್ನು ಸಾರ್ವಭೌಮ, ಸಮಾಜವಾದಿ, ಧರ್ಮನಿರಪೇಕ್ಷ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸುವುದಕ್ಕಾಗಿ
ಭಾರತದ ಎಲ್ಲಾ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು: ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯ ವನ್ನು: ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆಯನ್ನು ದೊರೆಯುವಂತೆ ಮಾಡುವುದಕ್ಕಾಗಿ:
ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ಶ್ರದ್ದಾಪೂರ್ವಕ ಸಂಕಲ್ಪ ಮಾಡುವುದರ ಮೂಲಕ ಪ್ರತಿಜ್ಞಾ ವಿಧಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ನಗರ ಸಭೆ. ಪೌರಾಯುಕ್ತ ಎ ವಾಸೀಂ ಮಾಳಿಗೆ, ಮಂಜುನಾಥ್, ರಮೇಶ್, ನಗರಸಭೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

