ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಗ್ರೂಪ್-ಸಿ ವೃಂದದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹೈ.ಕ ವೃಂದದ 97 ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಹಾಗೂ ಉಳಿಕೆ ಮೂಲ ವೃಂದದ-150 ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೈದ್ರಾಬಾದ್-ಕರ್ನಾಟಕ ವೃಂದದ 97 ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿಯನ್ನು ಮತ್ತು ಉಳಿಕೆ ಮೂಲ ವೃಂದದ 150 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ದಿನಾಂಕ:20-02-2026ರಂದು ಆಯೋಗದ http://kpsc.kar.nic.in-Lists-Final Selection List ಮತ್ತು ಕಟ್ ಆಫ್ ಅಂಕಗಳ ಪಟ್ಟಿಯನ್ನು ಆಯೋಗದ ಜಾಲತಾಣ http://kpsc.kar.nic.in-Lists-Cut-Off List ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.
ಸದರಿ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಈ ಹುದ್ದೆಗೆ ಆಯ್ಕೆಯಾಗಲು ಇಚ್ಛಿಸದಿದ್ದಲ್ಲಿ ಆಯೋಗದ ಅಂತರ್ಜಾಲದಲ್ಲಿ ಲಭ್ಯವಿರುವ Not-Willingress Certificate ಅನ್ನು ಡೌನ್ಲೋಡ್ ಮಾಡಿಕೊಂಡು Stamp Paper ನಲ್ಲಿ ನೋಟರಿ ಮುಖಾಂತರ ದೃಢೀಕರಿಸಿರುವ ಪ್ರಮಾಣಪತ್ರ ಮತ್ತು ಪೂರಕ ದಾಖಲೆಗಳೊಂದಿಗೆ ಆಯೋಗಕ್ಕೆ ಖುದ್ದಾಗಿ ಹಾಜರಾಗಿ ಸ್ವ-ಇಚ್ಚಾ ಹೇಳಿಕೆಯನ್ನು (Not Willing) ಸಲ್ಲಿಸುವಂತೆ ಹಾಗೂ ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿ ಸಂಬಂಧ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ,
ಈ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದ 07 ದಿನಗಳ ಒಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ. ಬೆಂಗಳೂರು-560001., ಇವರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಹಾಗೂ ಕೊನೆಯ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲವೆಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜ್ಯೋತಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

