ಪಿಡಿಒ ಶೋಭಾರಾಣಿ ಲೋಕಾಯುಕ್ತ ಬಲೆಗೆ

News Desk

ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ಗ್ರಾಮ ಪಂಚಾಯಿತಿ ಪಿಡಿಒ ಒಬ್ಬರು ಕಚೇರಿಯಲ್ಲೇ ಲಂಚ ಸ್ವೀಕಾರ ಮಾಡುವ ಸಂದರ್ಭದಲ್ಲೇ ಹಣ ಸಮೇತ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮ ಪಂಚಾಯಿತಿಯಲ್ಲಿ ಜರುಗಿದೆ.

ಪಿಡಿಒ ಶೋಭಾರಾಣಿ ಕಚೇರಿಯಲ್ಲಿಯೇ 20 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಆರೋಪಿ ಪಿಡಿಒ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

- Advertisement - 

ಏನಿದು ಘಟನೆ-
ನೆಲಮಂಗಲ ತಾಲೂಕಿನ ತೊರೆಕೆಂಪೋಹಳ್ಳಿ ಗ್ರಾಮದ ರಮೇಶ್ ಅವರಿಗೆ ಸೇರಿದ ಖಾಲಿ ನಿವೇಶನ ಟಿ.ಬೇಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದು ತನ್ನ ಹೆಂಡತಿಯ ಹೆಸರಿಗೆ ಖಾತಾ ವರ್ಗಾವಣೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು.

ಖಾತೆ ಮಾಡಿಕೊಡುವ ವಿಚಾರವಾಗಿ ಮಧ್ಯವರ್ತಿ ರುದ್ರಪ್ಪ ಮೂಲಕ ಪಿಡಿಒ 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಕೊಡುವ ಸಲುವಾಗಿ ರುದ್ರಪ್ಪ ರಮೇಶ್ ಅವರನ್ನು ಪಂಚಾಯಿತಿ ಕಚೇರಿಗೆ ಕರೆದುಕೊಂಡು ಬಂದಿದ್ದರು. ಲಂಚದ ಹಣ ಸ್ವೀಕರಿಸುವಾಗ ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ ಎಸ್ಪಿ ಪವನ್ ನಲ್ಲೂರು ನೇತೃತ್ವದ ತಂಡ ದಾಳಿ ಮಾಡಿದೆ. ತಕ್ಷಣವೇ ಶೋಭಾರಾಣಿ ಮತ್ತು ಹಣ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

- Advertisement - 

ಲೋಕಾಯುಕ್ತ ಬಲೆಗೆ ಬೀಳುತ್ತಿದಂತೆ ಪಿಡಿಒ ಆರೋಗ್ಯ ಸರಿಯಿಲ್ಲ ಎಂದು ನಾಟಕವಾಡಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ ಅಧಿಕಾರಿಗಳು ವಿಚಾರಣೆಯನ್ನು ಮುಂದುವರೆಸಿದ್ದಾರೆ.
ಟಿ.ಬೇಗೂರು ಗ್ರಾಮ ಪಂಚಾಯಿತಿ ಪಿಡಿಒ ಶೋಭರಾಣಿ ಈಗಾಗಲೇ 5 ಬಾರಿ ಅಮಾನತಾಗಿ
, ಅವರ ಮೇಲೆ ಭ್ರಷ್ಟಚಾರ ಆರೋಪದ ತನಿಖೆ ನಡೆಯುತ್ತಿದೆ. ಅಮಾನತು ಆದೇಶಕ್ಕೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದು ಮತ್ತೆ ಟಿ.ಬೇಗೂರು ಪಂಚಾಯಿತಿಯಲ್ಲೇ ಪಿಡಿಒ ಆಗಿ ಕೆಲಸ ನಿರ್ವಹಿಸುತ್ತಿದ್ದು ಅವರ ಮೇಲೆ ಸಾಕಷ್ಟು ದೂರುಗಳಿದ್ದ ಬಗ್ಗೆ ಸಾರ್ವಜನಿಕರು ಆರೋಪಿಸಿದ್ದಾರೆ.

Share This Article
error: Content is protected !!
";