ಬೈಕ್ ಡಿಕ್ಕಿ: ಪಾದಚಾರಿ ಕಾರ್ಮಿಕ ಸಾವು

khushihost

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ :
ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದಲ್ಲಿ ಪಾದಚಾರಿಯೋರ್ವನಿಗೆ ಬೈಕ್ ವೊಂದು ಡಿಕ್ಕಿ ಹೊಡೆದು ಆತ ಸಾವು ಕಂಡ ಘಟನೆ ನಿನ್ನೆ ನಡೆದಿದೆ.

ಹೊಸಕೊಪ್ಪ ಗ್ರಾಮದ ಕೂಲಿ ಕಾರ್ಮಿಕ ಚಂದ್ರಪ್ಪ (58) ಹೊಳೆಹೊನ್ನೂರಿನಲ್ಲಿ ಕೂಲಿ ಮುಗಿಸಿಕೊಂಡು ಮನೆ ಕಡೆ ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಂದ

KA 14 HA 0712 ಕ್ರಮಸಂಖ್ಯೆಯ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಒಳಗಾದ ವ್ಯಕ್ತಿಯ ಕಿವಿಯಲ್ಲಿ ರಕ್ತ ಬಂದಿದೆ. ತಕ್ಷಣವೇ ಆತನನ್ನು ಹೊಳೆಹೊನ್ನೂರು ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿತ್ತು.

ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

- Advertisement -  - Advertisement - 
Share This Article
error: Content is protected !!
";