ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ನಾಡಕಚೇರಿ ಕಾರ್ಯಾಲಯದಲ್ಲಿ ಸೋಮವಾರ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಯಿತು.
ಕಂದಾಯ ಇಲಾಖೆ ವತಿಯಿಂದ ಚಿತ್ರದುರ್ಗ ಉಪವಿಭಾಗಾಧಿಕಾರಿ ಮಹೆಬೂಬ್ ಜಿಲಾನಿ ಖುರೇಷಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪಿಂಚಣಿ ಅದಾಲತ್ನಲ್ಲಿ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳ ಕುಂದು ಕೊರತೆ ಆಲಿಸಿ, ಹೊಸದಾಗಿ ಪಿಂಚಣಿ ಮಂಜೂರಾತಿ ಆದೇಶಪ್ರತಿಗಳನ್ನು ನೀಡಲಾಯಿತು.
ಕಾರ್ಯಕ್ರಮದಲ್ಲಿ ಹಿರಿಯೂರು ತಹಶೀಲ್ದಾರ್ ರಾಜೇಶ್, ಪ್ರಭಾರಿ ನಾಡಕಚೇರಿ ತಹಶೀಲ್ದಾರ್ ಶಿವಕುಮಾರ್, ಕರ್ನಾಟಕ ಗ್ರಾಮೀಣ ಬ್ಯಾಂಕಿನ ವ್ಯವಸ್ಥಾಪಕರು ಹಾಗೂ ಹೋಬಳಿಯ ಎಲ್ಲಾ ಗ್ರಾಮಾಡಳಿತ ಅಧಿಕಾರಿಗಳು ಮತ್ತು ನಾಡಕಚೇರಿ ಸಿಬ್ಬಂದಿಗಳು, ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳು ಇದ್ದರು.