ವಿಕಲಚೇತನರು ದೇವರ ಮಕ್ಕಳು, ಅವರಿಗೆ ಮನೋಬಲವೇ ಶಕ್ತಿ-ಡಿಕೆಶಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಂಟಿಯಾಗಿ ಉದ್ಘಾಟಿಸಿದರು.

 ಈ ವೇಳೆ ವೇದಿಕೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಿವಕುಮಾರ್, ವಿಕಲಚೇತನರು ದೇವರ ಮಕ್ಕಳು. ಅವರಿಗೆ ಮನೋಬಲವೇ ಶಕ್ತಿ. ಅಂಗ ವೈಕಲ್ಯವನ್ನು ಮೆಟ್ಟಿ ನಿಂತು ಅವರು ಅನೇಕ ಸಾಧನೆಗಳನ್ನು ಮಾಡಿರುವ ಉದಾಹರಣೆಗಳು ನಮ್ಮ ಮುಂದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ಇದಲ್ಲದೆ ಪ್ಯಾರಾ ಒಲಿಂಪಿಕ್ಸ್‌ನಲ್ಲಿ ವಿಕಲಚೇತನರು ಹೆಚ್ಚು ಪದಕಗಳನ್ನು ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ವಿಘ್ನಗಳನ್ನು ನಿವಾರಿಸುವ ಗಣಪತಿಯೇ ವಿಕಲಚೇತನರಿಗೆ ಸ್ಫೂರ್ತಿ. ಹಾಗಾಗಿ ಅವರಲ್ಲಿ ಆತ್ಮಬಲ ಹೆಚ್ಚಿದೆ ಎಂದು ಅವರು ತಿಳಿಸಿದರು.

ವಿಕಲಚೇತನರ ಸಾಧನೆ ಇತಿಹಾಸದ ಪುಟಗಳಲ್ಲಿದ್ದು, ಅವರ ಅಭಿವೃದ್ಧಿಗೆ ಹಾಗೂ ಕಲ್ಯಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

 

- Advertisement -  - Advertisement -  - Advertisement - 
Share This Article
error: Content is protected !!
";