ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಹೋರಾಟಗಾರರು ಹಾಗೂ ಮಾಜಿ ತಾಲೂಕು ಅಧ್ಯಕ್ಷ ಎ. ಕೃಷ್ಣಸ್ವಾಮಿ(82) ರವರು ಹಿರಿಯೂರು ತಾಲೂಕು ಮಸ್ಕಲ್ ಮಟ್ಟಿ ಗ್ರಾಮದ ನಿವಾಸದಲ್ಲಿ ವಯೋ ಸಹಜ ಕಾಯಿಲೆಯಿಂದ ವಿಧಿವಶರಾಗಿರುತ್ತಾರೆ.
ಮೃತರಿಗೆ ನಾಲ್ಕು ಜನ ಹೆಣ್ಣು ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಮಂಗಳವಾರ ಮಧ್ಯಾಹ್ನ ಹಿರಿಯೂರು ತಾಲೂಕು ಮಸ್ಕಲ್ ಮಟ್ಟಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು.
ವಾಣಿ ವಿಲಾಸ ಸಾಗರಕ್ಕೆ 5 ಟಿಎಂಸಿ ನೀರು ಹರಿಸುವಂತೆ ಮತ್ತು ಬರ ಪೀಡಿತ ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಜಾರಿ ಗೊಳಿಸುವಂತೆ ನಿರಂತರ ಹೋರಾಟ ಮಾಡಿದ್ದರು. ಅಲ್ಲದೆ ರೈತರ ಸಮಸ್ಯೆಗಳಿಗೆ ನಿತ್ಯ ಸ್ಪಂದಿಸಿ ಕೆಲಸ ಮಾಡುತ್ತಿದ್ದರು ಎಂದು ರೈತ ಮುಖಂಡ ಆಲೂರು ನರೇಂದ್ರ ಸಂತಾಪ ಸೂಚಿಸಿ ಶ್ರದ್ಧಾಂಜಲಿ ಅರ್ಪಿಸಿ ತಿಳಿಸಿದ್ದಾರೆ.

