ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸೋಮವಾರ ನಡೆದ ಇ – ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಿ ಹಾಗೂ 2023 – 2024ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ರಾಜ್ಯದ ಎಲ್ಲಾ ಜಿಲ್ಲಾವಾರು ವ್ಯಾಪ್ತಿಯ ಗ್ರಾ.ಪಂ.ಗಳ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳೊಂದಿಗೆ ಸಾಂಕೇತಿಕವಾಗಿ ಪ್ರಶಸ್ತಿ ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಮಾತನಾಡಿದರು. ಕಾಂಗ್ರೆಸ್‌ಪಕ್ಷ ನಿಮ್ಮ ಹಿತಕ್ಕಾಗಿ ಕೆಲಸ ಮಾಡುತ್ತಿದೆ.
ಭಾರತದ ಭವಿಷ್ಯ ಅಡಗಿರುವುದು ಹಳ್ಳಿಯಲ್ಲಿ ಎಂದು ಗಾಂಧೀಜಿ ಅವರು ದೇಶಕ್ಕೆ ದೊಡ್ಡ ಸಂದೇಶವನ್ನು ಕೊಟ್ಟಿದ್ದಾರೆ. ನಿಮ್ಮ ಮನೆ ಬಾಗಿಲಿಗೆ ಇ – ಸ್ವತ್ತು ಮೂಲಕ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ರೂಪಿಸಿದೆ. ಆಸ್ತಿಗಳ ದಾಖಲೆಗಾಗಿ ‘ಇ – ಸ್ವತ್ತು‘ ಯೋಜನೆಯಡಿ ಅರ್ಜಿ ಸಲ್ಲಿಸಿದ 15 ದಿನಗಳೊಳಗೆ ಇ – ಖಾತಾ ವಿತರಿಸಲಾಗುತ್ತಿದೆ.
ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಲು ಆನ್‌ಲೈನ್‌ಹಾಗೂ ಬಾಪೂಜಿ ಸೇವಾ ಕೇಂದ್ರದಲ್ಲಿ ಇ – ಖಾತಾಕ್ಕಾಗಿ ಅರ್ಜಿ ಸಲ್ಲಿಸುವ ಅವಕಾಶವನ್ನು ಮಾಡಿದ್ದೇವೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ಸರ್ಕಾರ ಅಧಿಕಾರಕ್ಕೆ ಬಂದಾಗ ಸದಾ ಜನಪರ ಕಾರ್ಯಕ್ರಮವನ್ನು ರೂಪಿಸಿದ್ದೇವೆ ಎಂದು ಅವರು ತಿಳಿಸಿದರು.
ಪಂಚಾಯತಿಯಿಂದ ಪಾರ್ಲಿಮೆಂಟ್‌ವರೆಗೆ ಹೊಸ ನಾಯಕರನ್ನ ಬೆಳೆಸಬೇಕು ಎಂಬುದು ನಮ್ಮ ನಾಯಕರಾದ ರಾಜೀವ್‌ಗಾಂಧಿ ಅವರ ಕಲ್ಪನೆಯಾಗಿತ್ತು. ವಿಜಯಪುರ ಜಿಲ್ಲೆಯ ಗ್ರಾ.ಪಂ ವೊಂದರ ಅಧ್ಯಕ್ಷರಾಗಿದ್ದ ಬಿ.ಡಿ. ಜತ್ತಿ ಅವರು ದೇಶದ ಉಪ ರಾಷ್ಟ್ರಪತಿಯಾಗಿ, ಈ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಸ್ಥ
ಳೀಯ ಸಂಸ್ಥೆಗಳೇ ಸರ್ಕಾರದ ಆಧಾರಸ್ತಂಭ. ಗ್ರಾಮೀಣ ಮಟ್ಟದಲ್ಲಿ ನೀವು ನಾಯಕರಾಗಿ ಬೆಳೆದು ಜನರ ಹೃದಯವನ್ನು ಗೆಲ್ಲಬೇಕು. ಈ ಸರ್ಕಾರ ನಿಮ್ಮ ಪರವಾಗಿ, ನಿಮ್ಮ ಕೈ‘ಬಲಪಡಿಸಲು ಸದಾ ಜೊತೆಯಾಗಿರಲಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದರು.

