ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ

News Desk

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:

ನಗರದ ರೈಲ್ವೆ ನಿಲ್ದಾಣ ಫ್ಲಾಟ್ ಫಾರಂ ಸಂಖ್ಯೆ ಒಂದರಲ್ಲಿ ಶೈಲೂ ಎನ್ನುವ 06 ವರ್ಷದ ಹೆಣ್ಣು ಮಗು ಜು.19 ರಂದು ಪತ್ತೆಯಾಗಿದ್ದು, ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಸಹಕರಿಸಬೇಕೆಂದು ಬಳ್ಳಾರಿ ರೈಲ್ವೇ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಮನವಿ ಮಾಡಿದ್ದಾರೆ.

ಮಗುವಿನ ಚಹರೆ ವಿವರ:

ದುಂಡು ಮುಖ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ. ಈ ಮೇಲ್ಕಂಡ ಚಹರೆ ಗುರುತುಳ್ಳ ಹೆಣ್ಣು ಮಗುವಿನ ಪೋಷಕರ ಬಗ್ಗೆ ಮಾಹಿತಿ ಸಿಕ್ಕಲ್ಲಿ  ಬಳ್ಳಾರಿ ರೈಲ್ವೇ ಪಿಎಸ್ ದೂ.08392-276063, ಮೊ.9480802131, ಇ-ಮೇಲ್ bellaryrly@ksp.gov.in ಅಥವಾ dcrly@ksp.gov.in ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";