ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ದಾವಣಗೆರೆ ಜಲ್ಲೆಯ ಹೊನ್ನಾಳಿ ತಾಲ್ಲೂಕಿನ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.
ಚಿತ್ರದುರ್ಗ ನಗರದ ತಮಟಕಲ್ ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಪದಗ್ರಹಣ ಮಾಡಿದರು.
ಈ ಸಂದರ್ಭದಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಮಾಜಿ ಸಚಿವ ಎಚ್.ಆಂಜನೇಯ, ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಲ್.ಎ.ಕೃಷ್ಣನಾಯಕ್, ಉಪ ಕಾರ್ಯದರ್ಶಿ ಸತೀಶ್ ರೆಡ್ಡಿ, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿದಂತೆ ಮತ್ತಿತರರು ಇದ್ದರು.

