ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೊಲೀಸ್ ಪೇದೆಯೊಬ್ಬರು ಪಾಸ್ ಪೋರ್ಟ್ ಪರಿಶೀಲನೆಯ ನೆಪದಲ್ಲಿ ಮಹಿಳಾ ಟೆಕ್ಕಿ ಜೊತೆ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಪೇದೆಯೊಬ್ಬರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ ಎಂದು ಪೊಲೀಸ್ ಮೇಲಾಧಿಕಾರಿಗಳು ತಿಳಿಸಿದ್ದಾರೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿದ್ದ ಕಾನ್‌ಸ್ಟೆಬಲ್‌ಕಿರಣ್ ವಿರುದ್ಧ ಮಹಿಳೆ ದೂರು ನೀಡಿದ್ದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್.ಗಿರೀಶ್ ಆರೋಪಿ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಆರೋಪಿ ಕಾನ್‌ಸ್ಟೆಬಲ್ ಕಿರಣ್ ಪಾಸ್‌ಪೋರ್ಟ್ ಪರಿಶೀಲನೆ ನೆಪದಲ್ಲಿ ಮಹಿಳಾ ಟೆಕ್ಕಿ ಮನೆಗೆ ಬಂದು ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಮಹಿಳೆ ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವಿಚಾರಣೆಯ ನಂತರ, ಕಾನ್‌ಸ್ಟೆಬಲ್ ಅನ್ನು ಶನಿವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.