ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಡ್ಯಾನ್ಸ್ ಬಾರ್ಗಳ ಮೇಲೆ ಗುರುವಾರ ತಡರಾತ್ರಿ ದಾಳಿ ಮಾಡಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ನಗರದ ಕ್ಲಬ್ ಒನ್, ರಂಬಾ, ಬ್ರಿಗೇಡ್ ಬ್ಲೂ ಸೇರಿದಂತೆ 17 ಕ್ಕೂ ಹೆಚ್ಚು ಬಾರ್ಗಳ ಮೇಲೆ ಪೊಲೀಸರು ದಾಳಿ ನಡೆದಿದೆ.
ಅವಧಿ ಮೀರಿ ಕಾರ್ಯಾಚರಿಸುತ್ತಿರುವುದು, ಯುವತಿಯರಿಂದ ಅಶ್ಲೀಲ ನೃತ್ಯ ಮಾಡಿಸುತ್ತಿರುವುದೂ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆ ಆರೋಪದ ಕಾರಣ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಡ್ಯಾನ್ಸ್ ಬಾರ್ಗಳ ಮೇಲೂ ದಾಳಿ ನಡೆದಿದೆ. ಕಬ್ಬನ್ ಪಾರ್ಕ್, ಅಶೋಕ್ ನಗರ, ಎಸ್.ಜೆ.ಪಾರ್ಕ್, ಉಪ್ಪಾರಪೇಟೆ ಸೇರಿ ನಗರದ ವಿವಿಧ ಠಾಣಾ ವ್ಯಾಪ್ತಿಗಳ ಬಾರ್ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ನಿಯಮ ಉಲ್ಲಂಘಿಸಿದ ಬಾರ್ಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.