ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ  2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ
Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ರಾರಂಭಿಸಲು ಸರ್ಕಾರದಿಂದ ಆದೇಶ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ರಾಜ್ಯಾದ್ಯಂತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು, ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ, ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ತರಬೇತಿ ನೀಡಲು ಉದ್ದೇಶಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://sevasindhu.karnataka.gov.in/Sevasindhu/DepartmentServices ಅಥವಾ  https://dom.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನಾಂಕವಾಗಿರುತ್ತದೆ.

90 ದಿನದ ವಸತಿಯುತ ತರಬೇತಿಯಾಗಿದ್ದು, ತರಬೇತಿಯು ಮೈಸೂರು ಮತ್ತು ಬೆಳಗಾವಿಯಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಅಧಾರದ ಮೇಲೆ ಆಯ್ಕೆ ಮಾಡಲಾಗುವುದು.

 

 

Share This Article
error: Content is protected !!
";