ನಕ್ಸಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

News Desk

ಚಂದ್ರವಳ್ಳಿ ನ್ಯೂಸ್, ಉಡುಪಿ:
ಇತ್ತೀಚೆಗೆ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗಿದ್ದ ಆರು ಮಂದಿ ನಕ್ಸಲರ ಪೈಕಿ ನಾಲ್ವರನ್ನು ವಶಕ್ಕೆ ಪಡೆದಿರುವ ಕಾರ್ಕಳ ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಕಾರ್ಕಳ- ಹೆಬ್ರಿಯ
15 ಪ್ರಕರಣಗಳ ಕುರಿತು ತನಿಖೆ ನಡೆಸಲು ಮಾರಪ್ಪ (ಜಯಣ್ಣ), ಮುಂಡಗಾರು ಲತಾ, ವನಜಾಕ್ಷಿ(ಜ್ಯೋತಿ), ಸುಂದರಿ(ಗೀತಾ, ಜೆನ್ನಿ) ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾರ್ಕಳ ಜೆಎಂಎಫ್​ಸಿ ನ್ಯಾಯಾಲಯವು ನಾಲ್ವರು ನಕ್ಸಲರನ್ನು 5 ದಿನ ಪೊಲೀಸರ ವಶಕ್ಕೆ ನೀಡಿ ಆದೇಶ ಮಾಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದ ಕಾರಾಗೃಹದಿಂದ ಇವರನ್ನು ಕಾರ್ಕಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಸ್ತ್ರಾಸ್ತ್ರ ತ್ಯಜಿಸಿ ನಕ್ಸಲರು:
ಎನ್‌ಕೌಂಟರ್ ನಲ್ಲಿ ಮೃತರಾಗಿದ್ದ ನಕ್ಸಲ್ ನಾಯಕ ವಿಕ್ರಂಗೌಡ ಬಳಿಕ ತೆರೆಮರೆಯಲ್ಲಿ ಹೋರಾಟ ನಡೆಸುತ್ತಿರುವವರು ಮುಖ್ಯವಾಹಿನಿಗೆ ಬಂದರೆ ಸರ್ಕಾರ ಸಹಾನುಭೂತಿಯಿಂದ ನಡೆದುಕೊಳ್ಳುತ್ತದೆ ಎಂದು ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದನ್ನು ನಂಬಿ ಆರು ಮಂದಿ ನಕ್ಸಲರು ಜ.
8ರಂದು ಶರಣಾಗಿದ್ದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯನವರ ಎದುರು ಶರಣಾಗಿದ್ದ ನಕ್ಸಲರಿಗೆ ಹೂಗುಚ್ಛ ಹಾಗೂ ಸಂವಿಧಾನ ಪುಸ್ತಕ ನೀಡಿ ಸ್ವಾಗತಿಸಿದನ್ನು ಸ್ಮರಿಸಬಹುದಾಗಿದೆ.

 

 

Share This Article
error: Content is protected !!
";