ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ. ಏನು ಆಗುತ್ತೋ ಆಗಲಿ-ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ. ಏನು ಆಗುತ್ತೋ ಆಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧದ ಕೆಂಗಲ್ ಗೇಟ್ ಬಳಿಯ ಪ್ರವೇಶ ದ್ವಾರದ ಬಳಿ ಶಾಸಕ ಬೇಳೂರು ಗೋಪಾಲಕೃಷ್ಣ ಜೊತೆ ಅನೌಪಚಾರಿಕವಾಗಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ ಮೇಲಿನಂತೆ ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜಕೀಯ ಶಾಶ್ವತ ಅಲ್ಲ. ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ. ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ. ಏನ್​ ಆಗುತ್ತೋ ಆಗಲಿ ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದರು.

- Advertisement - 

ಯಾವತ್ತೂ ಯೋಚನೆ ಮಾಡಿ ಗೊತ್ತೇ ಇಲ್ಲ ನಂಗೆ. ಏನ್​ ಆಗುತ್ತೋ ಆಗಲಿ. ರಾಜಕೀಯ ನಮ್ಮಪ್ಪನ ಆಸ್ತಿನಾ? ಏನು ಆಗುತ್ತೋ ಆಗಲಿ. ರಾಜಕೀಯ ಶಾಶ್ವತ ಅಲ್ಲ ಎಂದು ವೈರಾಗ್ಯದ ರೀತಿಯಲ್ಲಿ ಸಿದ್ದರಾಮಯ್ಯ ಮಾತನಾಡಿದರು.

ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಉದಯ ಕದಲೂರು ಜೊತೆ ವಿಧಾನಸೌಧದಿಂದ ತೆರಳುವ ವೇಳೆ ಲೋಕಾಭಿರಾಮವಾಗಿ ಮಾತನಾಡುತ್ತಾ ಪ್ರಸಕ್ತ ರಾಜಕೀಯ ವಿದ್ಯಮಾನದ ಬಗ್ಗೆ ಮಾತನಾಡಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ.

- Advertisement - 

ಸದಾಶಿವನಗರ ಡಿಕೆಶಿ ಮನೆಯಲ್ಲಿ ಉಪಹಾರ ಸಭೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರ ಈ ರಾಜಕೀಯ ಮಾತು ಸಾಕಷ್ಟು ಕುತೂಹಲ ಕೆರಳಿಸಿದೆ. ಅಧಿಕಾರ ಹಂಚಿಕೆ ಚರ್ಚೆ, ಪವರ್ ಫೈಟ್ ಮಧ್ಯೆ ಸಿಎಂ ಸಿದ್ದರಾಮಯ್ಯ ಅನೌಪಚಾರಿಕವಾಗಿ ಪ್ರಸಕ್ತ ರಾಜಕೀಯ ವಿದ್ಯಮಾನದ ಹಿನ್ನೆಲೆ ಈ ರೀತಿ ಶಾಸಕರ ಜೊತೆ ಸಂಭಾಷಣೆ ಮಾಡಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ ಬದಲಾಗುತ್ತಾರಾ ಎನ್ನುವ ಚರ್ಚೆ ಕೂಡ ಜೋರಾಗಿ ಕೇಳಿ ಬರುತ್ತಿದೆ.

 

 

Share This Article
error: Content is protected !!
";