ಪೂಜಾ, ಇಂಚರ, ಬಿಂದು “ಬಾಪೂಜಿ ಪ್ರಬಂಧ ಸ್ಪರ್ಧಾ ವಿಜೇತರು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಮಹಾತ್ಮಾ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ಬಾಪೂಜಿ  ಪ್ರಬಂಧ ಸ್ಪರ್ಧೆಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ಮೂವರು ವಿದ್ಯಾರ್ಥಿಗಳನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.

ಮಹಾತ್ಮಾ ಗಾಂಧೀಜಿಯವರ ಜೀವನ, ಸಾಧನೆ ಹಾಗೂ ಅವರ ಸರಳತೆ, ಅಹಿಂಸಾ ತತ್ವಗಳ ಬಗ್ಗೆ ಯುವಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪಧೆಯನ್ನು ಏರ್ಪಡಿಸಲಾಗಿತ್ತು.

 ಬಾಪೂಜಿ ಪ್ರಬಂಧ ಸ್ಪರ್ಧೆಯ ಪ್ರೌಢಶಾಲಾ ವಿಭಾಗದಲ್ಲಿ ಮೊಳಕಾಲ್ಮುರು ತಾಲ್ಲೂಕು ದೇವಸಮುದ್ರ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪೂಜಾ (ಪ್ರಥಮ), ಹಿರಿಯೂರು ತಾಲ್ಲೂಕು ಎಂ.ಡಿ.ಕೋಟೆ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪಿ.ಇಂಚರ (ದ್ವಿತೀಯ) ಹಾಗೂ ಚಿತ್ರದುರ್ಗ ನಗರದ ಶ್ರೀ ಬೃಹನ್ಮಠ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪಿ.ಸಿ.ಬಿಂದು (ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಮೊಳಕಾಲ್ಮುರು ಚಿಕ್ಕೋಬನಹಳ್ಳಿ ಎಸ್ಎಪಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಎಂ.ಅಭಿಷೇಕ್ (ಪ್ರಥಮ), ಚಿತ್ರದುರ್ಗ ನಗರದ ವೆಸ್ಟರನ್ ಹಿಲ್ಸ್ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ .ಅಮೃತ (ದ್ವಿತೀಯ) ಹಾಗೂ ಚಳ್ಳಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ  ಹೆಚ್.ದಾದಾಪೀರ್ (ತೃತೀಯ) ಸ್ಥಾನ ಪಡೆದಿದ್ದಾರೆ.

ಪದವಿಸ್ನಾತಕೋತ್ತರ ವಿಭಾಗದಲ್ಲಿ ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜಿನ ಬಿಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿ ಜಿ.ಎಸ್.ಅಮೂಲ್ಯ (ಪ್ರಥಮ), ಚಿತ್ರದುರ್ಗದ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ದ್ವಿತೀಯ ವರ್ಷದ ಬಿ.ಇಡಿ ವಿದ್ಯಾರ್ಥಿ ಡಿ.ಆರ್.ಸಂತೋಷ್ ಕುಮಾರ್ (ದ್ವಿತೀಯ) ಹಾಗೂ ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ಪ್ರಥಮ ವರ್ಷದ ವಿದ್ಯಾರ್ಥಿನಿ .ಚೈತ್ರ (ತೃತೀಯ) ಸ್ಥಾನ ಪಡೆದಿದ್ದಾರೆ.

 ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಕ್ರಮವಾಗಿ ರೂ. 3000, 2000 ಹಾಗೂ 1000 ರೂ. ನಗದು ಬಹುಮಾನ ನೀಡಲಾಗುವುದು.  ಇದೇ .02ರಂದು ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿರುವ ಮಹಾತ್ಮಾ ಗಾಂಧಿ ಜಯಂತಿ ಸಮಾರಂಭದಲ್ಲಿ ನಗದು ಬಹುಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ತಿಳಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";