ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಸಂದೇಶದ ಪ್ರಕರಣ ಸಿಸಿಬಿಗೆ ರವಾನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾಜಿ ಸಂಸದೆ, ಖ್ಯಾತ ಚಿತ್ರ ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್
, ಸಂದೇಶಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸುತ್ತಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಸಾಮಾಜಿಕ ಜಾಲತಾಣ, ಇನ್​ಸ್ಟ್ರಾಗಾಂ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಟಿ ರಮ್ಯಾ ದೂರು ನೀಡಿದ ಬೆನ್ನಲ್ಲೇ 30ಕ್ಕೂ ಅಧಿಕ ಇನ್​ಸ್ಟ್ರಾಗಾಂ ಖಾತೆಗಳ ಮೇಲೆ ಎಫ್ಐಆರ್ ದಾಖಲಾಗಿದೆ. ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಂದೇಶ ರವಾನೆ, ಕಾಮೆಂಟ್ ಮಾಡುತ್ತಿದ್ದವರ ವಿರುದ್ಧ ಜುಲೈ 28 ರಂದು ಖುದ್ದು ರಮ್ಯಾ ಅವರೇ ತೆರಳಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹಾಗೂ ಸೈಬರ್ ಕ್ರೈಮ್ ಠಾಣೆಗೆ ದೂರು ನೀಡಿದ್ದರು.

- Advertisement - 

ಅದರನ್ವಯ ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 2023ರ 351(2) (ಕ್ರಿಮಿನಲ್ ಬೆದರಿಕೆಯ ಉದ್ದೇಶದ ಅಪರಾಧ), 351(3) (ಸಾವು, ತೀವ್ರ ನೋವುಂಟು ಮಾಡುವ ಉದ್ದೇಶದ ಕ್ರಿಮಿನಲ್ ಬೆದರಿಕೆ), 352 (ಉದ್ದೇಶಪೂರ್ವಕ ಅವಮಾನದ ಮೂಲಕ ಶಾಂತಿಭಂಗದ ಯತ್ನ), 75(1) (ಲೈಂಗಿಕ ಕಿರುಕುಳ) 75(1)(IV) (ಲೈಂಗಿಕ ಟೀಕೆ) ಹಾಗೂ 79 (ಮಹಿಳೆಯ ಗೌರವಕ್ಕೆ ಧಕ್ಕೆ) ಆರೋಪದಡಿ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದರು.

ಸಿಸಿಬಿಗೆ ವರ್ಗಾವಣೆ ಮಾಡಲಾದ ರಮ್ಯಾ ಪ್ರಕರಣದ ತನಿಖೆಯನ್ನು  ಜಂಟಿ ಆಯುಕ್ತರ ಮೇಲ್ವಿಚಾರಣೆಯಲ್ಲಿ ಓರ್ವ ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯಲಿದೆ ಎಂದು ಆಯುಕ್ತರು ತಿಳಿಸಿದರು.

- Advertisement - 

 

Share This Article
error: Content is protected !!
";