ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.೭ ರಂದು ಅದ್ದೂರಿಯಾಗಿ ಆಚರಿಸುವ ಸಂಬಂಧ ಜಿಲ್ಲಾ ನಾಯಕ ಸಮಾಜದಿಂದ ವಾಲ್ಮೀಕಿ ಭವನದ ಮುಂಭಾಗ ಮಂಗಳವಾರ ಪೋಸ್ಟರ್ಗಳನ್ನು ಬಿಡುಗಡೆಗೊಳಿಸಲಾಯಿತು.
ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಅಂದು ಬೆಳಿಗ್ಗೆ ಹತ್ತು ಗಂಟೆಗೆ ಕೋಟೆ ಮುಂಭಾಗದಿಂದ ಮೆರವಣಿಗೆ ಹೊರಟು ವಾಲ್ಮೀಕಿ ಭವನ ತಲುಪಲಿದೆ. ಮಧ್ಯಾಹ್ನ ೧೨ ಗಂಟೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. ನಾಯಕ ಸಮಾಜದವರು ಹಾಗೂ ಸೋದರ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ನಾಯಕ ಸಮಾಜದ ಅಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮನವಿ ಮಾಡಿದರು.
ನಗರಸಭೆ ಮಾಜಿ ಸದಸ್ಯ ಎ.ತಿಪ್ಪೇಸ್ವಾಮಿ, ಬಿ.ಮಂಜುನಾಥ, ಸೊಂಡೆಕೊಳ ಶ್ರೀನಿವಾಸ್, ನಿವೃತ್ತ ಪ್ರಾಂಶುಪಾಲರಾದ ಗುಡ್ಡದೇಶ್ವರಪ್ಪ, ಸಿ.ಜಿ.ಶ್ರೀನಿವಾಸ್, ಮಂಜುನಾಥ
ಬಸವರಾಜ ಬಚ್ಚಬೋರನಹಟ್ಟಿ, ನ್ಯಾಯವಾದಿ ಅಶೋಕ್ಬೆಳಗಟ್ಟ, ಬೋರೇಶ್, ಸುರೇಶ್ ಗೋನೂರು, ಪ್ರಶಾಂತ್ ಇನ್ನು ಅನೇಕರು ಈ ಸಂದರ್ಭದಲ್ಲಿದ್ದರು.

