ನ.30 ಮತ್ತು ಡಿ.2,4,6 ರಂದು ವಿದ್ಯುತ್ ವ್ಯತ್ಯಯ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಬೃಹತ್ 66ಕೆ.ವಿ ಗೋಪುರ ನಿರ್ಮಾಣ ಹಮ್ಮಿಕೊಂಡಿರುವುದರಿಂದ ನ.30 ಹಾಗೂ ಡಿ.2, 4 ಮತ್ತು 6ರಂದು ಪಂಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 66/11 ಕೆವಿ ಪಂಡರಹಳ್ಳಿ ವಿವಿ ಕೇಂದ್ರದಿಂದ ಸರಬರಾಜಾಗುವ 11ಕೆವಿ ಮಾರ್ಗದ ಅನ್ನೇಹಾಳ್, ಹುಲ್ಲೂರು ಎನ್.ಜೆ.ವೈ, ಪಂಡರಹಳ್ಳಿ ಕಾವಲಹಟ್ಟಿ, ಕುರುಬರಹಳ್ಳಿ, ಎಫ್-10 ಬೆಟ್ಟದನಾಗೇನಹಳ್ಳಿ, ಸಿಂಗಾಪುರ, ಕಕ್ಕೇರು ಎನ್.ಜೆ.ವೈ ಸರಬರಾಜು ಕೇಂದ್ರಕ್ಕೆ

ಹೊಂದಿಕೊAಡಿರುವ ಅನ್ನೇಹಾಳ್, ಹುಲ್ಲೂರು, ಪಂಡರಹಳ್ಳಿ ಕಾವಲಹಟ್ಟಿ, ಮಹದೇವನಹಟ್ಟಿ, ಗೊಡಬನಾಳ್, ಸೊಂಡೆಕೊಳ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಸಿಂಗಾಪುರ ಹಾಗೂ ಕಕ್ಕೇರು ಗ್ರಾಮಗಳು ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";