ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಜಾವಾಣಿಯ ಹಿರಿಯ ಪತ್ರಕರ್ತೆ ಎಸ್.ರಶ್ಮಿ ಅವರ ತಂದೆ ಶರಣ ಬಸಯ್ಯ (83) ಅವರು ಬೀದರ್‌ನಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾದರು.
ಪತ್ನಿ ಲೇಖಕಿ ಭಾರತಿ ವಸದ, ಓರ್ವ ಪುತ್ರಿ ರಶ್ಮಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅವರು ಅಗಲಿದ್ದಾರೆ.
ಬೀದರ್ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೃತರ ಅಂತ್ಯಕ್ರಿಯೆ ರಾಯಚೂರು ಜಿಲ್ಲೆ ಲಿಂಗಸೂರು ತಾಲೂಕು ಹಟ್ಟಿ ಚಿನ್ನದ ಗಣಿ ಗಟಲಣಿ ಬಳಿ ಇರುವ ಯರಡೋಣ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಂತಾಪ:
ಶರಣ ಬಸಯ್ಯ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಪತ್ರಕರ್ತರ ಬಳಗದ ಸ್ನೇಹಿತರು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.