ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಭಾರತೀಯ ಜನತಾ ಪಾರ್ಟಿ ಮತ್ತು ಶ್ರೀ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ  ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಪ್ರತೀ ವರ್ಷದಂತೆ ಸತತ 6ನೇ ಭಾರಿಯೂ SSLC ಮತ್ತು PUCಯಲ್ಲಿ ಅತೀ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದೊಡ್ಡಬಳ್ಳಾಪುರ ಕ್ಷೇತ್ರದ ಶಾಸಕ ಧೀರಜ್ ಮುನಿರಾಜ್ ಅವರು  ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ದೊಡ್ಡಬಳ್ಳಾಪುರ ನಗರದಲ್ಲಿರುವ ತಮ್ಮ ಸ್ವಗೃಹ ಬಳಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನಾದ್ಯಂತ ಶೇ. 85ಕ್ಕಿಂತ ಹೆಚ್ಚು ಅಂಕ ಪಡೆದ 700 ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ನಗದು ಬಹುಮಾನ ನೀಡಿ ನೆನಪಿನ ಕಾಣಿಕೆ ಕೊಟ್ಟು ಗೌರವಿಸಿದ್ದಾರೆ.  

- Advertisement - 

ಈ ವೇಳೆ ಮಾತನಾಡಿದ ಶಾಸಕ ಧೀರಜ್ ಮುನಿರಾಜು ತಮ್ಮ ಸರ್ಕಾರಿ ಸಂಬಳದಲ್ಲಿ ಈ ವರ್ಷದಿಂದ ಆರಂಭಗೊಂಡು ಪ್ರತೀ ವರ್ಷ ಮೆರಿಟ್ ನಲ್ಲಿ ಉಚಿತ ಸೀಟ್ ಪಡೆದು ಮೆಡಿಕಲ್ ವ್ಯಾಸಂಗ ಮಾಡುವ ಬಿಪಿಎಲ್ ಕಾರ್ಡ್ ಹೊಂದಿರುವ ಆರ್ಥಿಕ ಸಂಕಷ್ಟದಲ್ಲಿರುವ ಬಡ 10 ವಿದ್ಯಾರ್ಥಿಗಳಿಗೆ ತಲಾ 50 ಸಾವಿರ  ಪ್ರೋತ್ಸಾಹ ಧನ ನೀಡುವುದಕ್ಕೆ ಪ್ರಯತ್ನಿಸುತ್ತೇನೆ. ನಿಮ್ಮ ಜೀವನ ಭವಿಷ್ಯ ಉಜ್ವಲವಾಗಿರಲಿ. ಮುಂದಿನ 10 ವರ್ಷಗಳ ಕಾಲ ಬೆಂಗಳೂರು ಗ್ರಾಮಾಂತರ, ಕರ್ನಾಟಕ ಕ್ಕೆ ಸುವರ್ಣ ಕಾಲ,

10 ವರ್ಷಗಳಲ್ಲಿ ಅತಿ ಹೆಚ್ಚು ಹೂಡಿಕೆ ಆಗಲಿದೆ. ನಮ್ಮ ತಾಲ್ಲೂಕು ಹಾಗೂ ಜಿಲ್ಲೆಯಲ್ಲಿ 2 ಪಟ್ಟು ಹೂಡಿಕೆ ಆಗುತ್ತದೆ. ನೂರಾರು ಉದ್ಯೋಗ ಅವಕಾಶಗಳು ನಿಮಗೆ ಸಿಗುತ್ತವೆ. ಇದು ಓದುವ ಕಾಲ ಹಾಗೂ ಎಂಜಾಯ್ ಮಾಡುವ ಕಾಲ. ಯಾವುದನ್ನೂ ಅಧಿಕ ಮಾಡಿಕೊಳ್ಳಬೇಡಿ. ಎಲ್ಲವನ್ನೂ ಸಮತೋಲನದಲ್ಲಿ ಇಟ್ಟುಕೊಳ್ಳಬೇಕು. ನಿಮ್ಮ ಶ್ರಮಕ್ಕೆ ಬೆಲೆ ಇದ್ದೇ ಇರುತ್ತೆ ಎಂದರು.  ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ವಿದ್ಯಾರ್ಥಿಗಳು, ಪೋಷಕರು ಭಾಗಿಯಾಗಿದ್ದರು.

- Advertisement - 

Share This Article
error: Content is protected !!
";