ಅಂಜನಾದ್ರಿ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನದ
  ಸ್ಮರಣಾರ್ಥವಾಗಿ ಅಂಜನಾದ್ರಿ ಚಾರಿಟೇಬಲ್ ಟ್ರಸ್ಟ್ ಹಾಗು ಭಾರತೀಯ ಜನತಾ ಪಾರ್ಟಿ ಸಹಯೋಗ ದೊಂದಿಗೆ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಯಲ್ಲಿ  ಶೇಕಡ 80 ಕ್ಕಿಂತಲೂ ಅಧಿಕ ಅಂಕಗಳು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರ ಹೊರವಲಯದ  ಡಿ ಕ್ರಾಸ್  ಬಳಿಯಿರುವ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ಹಾಗು ಭಾರತೀಯ ಜನತಾ ಪಕ್ಷದಿಂದ  ಶೇಕಡ 80 ಕ್ಕಿಂತಲೂ ಅಧಿಕ ಗಳಿಸಿದ ಸಾವಿರ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.ಇದೇ ಸಂದರ್ಭದಲ್ಲಿ  ಮಾಜಿ ಪ್ರದಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಹಾಗು ದೀಪ ಬೆಳಗುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಕುರಿತು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹಾಗೂ ಸ್ಥಳೀಯ ಶಾಸಕ ಧೀರಜ್ ಮುನಿರಾಜು ಮಾತನಾಡಿ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರೋತ್ಸಾಹಧನವನ್ನು ವಿವಿಧ ದಿನಾಂಕಗಳಲ್ಲಿ ವಿತರಣೆ ಮಾಡಲಾಗುತ್ತಿತ್ತು ಆದರೆ ಈ ವರ್ಷದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಿಪೇಯಿ ಅವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 25 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ನಿರ್ಧಾರಿಸಿದ್ದೇವೆ ಎಂದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ತಾಲೂಕಿನ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ಅನುಕೂಲವಾಗುವಂತೆ ವಾಗ್ಮಿಗಳಾದ ಮಂಜುನಾಥ್ ರವರ ನೇತೃತ್ವದಲ್ಲಿ ಸ್ಪೂರ್ತಿದಾಯಕ ಭಾಷಣವನ್ನು  ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಶೇಕಡಾ 80 ಕ್ಕಿಂತ ಅಧಿಕ ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದು, ಕರೋನಾ ಸಂದರ್ಭದಲ್ಲಿ ಪ್ರಾರಂಭವಾದ ಈ ಪ್ರಕ್ರಿಯೆಯು ಇಂದು ಐದು ವರ್ಷಕ್ಕೆ ಕಾಲಿಟ್ಟಿದೆ, ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ಕಟ್ಟಲು ಆಗದ ವಿದ್ಯಾರ್ಥಿಗಳಿಗೆ ಈ ಪ್ರೋತ್ಸಾಹ ಧನವು ಅತ್ಯಂತ ಸಹಕಾರಿಯಾಗಿದೆ ಎಂದರು.

ಪ್ರಸ್ತುತ ಕಾಲದಲ್ಲಿ ಪ್ರಜ್ಞಾ ವಂತರಿಗೆ, ಬುದ್ದಿವಂತರಿಗೆ ತುಂಬಾ ಪ್ರಾಮುಖ್ಯತೆ ಇದೆ,ಅಮೇಜಾನ್, ಸ್ವಿಗ್ಗಿ, ಫ್ಲಿಪ್ ಕರ್ಟ್ ನಂತಹ ಎಷ್ಟೋ ಕಂಪನಿಗಳನ್ನು ಕಟ್ಟಿ ಬೆಳೆಸಿದ ಉದಾಹರಣೆಗಳು ನಮ್ಮ ಮುಂದಿವೆ, ಉತ್ತಮ ವಿದ್ಯೆ ಉಳ್ಳವರು ಇದು ಜಗತ್ತನ್ನು ಮುನ್ನೆಡೆಸುತ್ತಿದ್ದಾರೆ. ಇದನ್ನು ಅರಿತು ವಿದ್ಯಾರ್ಥಿಗಳು ಸಾಧಕರ ಸಾಧನೆಯನ್ನು ಸ್ಫೂರ್ತಿಯಾಗಿ ಪಡೆದು ಮುಂದೆ ಸಮಾಜಕ್ಕೆ ಉತ್ತಮ ಪ್ರಜೆಗಳಾಗಿ ದೇಶಕ್ಕೆ ಉತ್ತಮ ಸೇವೆ ಒದಗಿಸು ವಂತಾಗಲಿ ಎಂದರು.

ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಹನುಮಂತರಾಯಪ್ಪ ಮಾತನಾಡಿ ತಾಲೂಕಿನ ವಿದ್ಯಾರ್ಥಿಗಳಿಗೆ ಸದಾ ಬೆಂಬಲವಾಗಿ ನಿಂತಿರುವ ಅಂಜನಾದ್ರಿ ಚಾರಿಟಬಲ್ ಟ್ರಸ್ಟ್ ನ ಸಂಸ್ಥಾಪಕ ಮುನಿರಾಜು ಹಾಗೂ ಶಾಸಕ ಧೀರಜ್ ಮುನಿರಾಜು ರವರ ಕಾರ್ಯ ಶ್ಲಾಘನೀಯ, ವಿಶೇಷವಾಗಿ ದೇಶ ಕಂಡ ಅಪ್ರತಿಮ ನಾಯಕ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥವಾಗಿ ಪ್ರತಿಭಾ ಪುರಸ್ಕಾರ ಮಾಡುತ್ತಿರುವುದು ಅರ್ಥಪೂರ್ಣವಾಗಿದೆ

 ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಎರಡು ಬಾರಿ ನನ್ನ ಚುನಾವಣಾ ಪ್ರಚಾರಕ್ಕೆಂದು ದೊಡ್ಡಬಳ್ಳಾಪುರ ತಾಲೂಕಿಗೆ ಭೇಟಿ ನೀಡಿದ್ದರು,ನನ್ನ ಮತ್ತು ಅವರ ಒಡನಾಟ ತುಂಬಾ ಹತ್ತಿರವಾದದ್ದು, ಬಿಜೆಪಿ ಪಕ್ಷದಿಂದ ಇಂತಹ ಉತ್ತಮ ಕಾರ್ಯಗಳು ನಮ್ಮ ತಾಲೂಕಿನಲ್ಲಿ ನಡೆಯುತ್ತಿರುವುದು ಶ್ಲಾಘನೀಯ ಸಂಗತಿ‌. ಶಾಸಕ ಧೀರಜ್ ಮುನಿರಾಜು ರವರ ನೇತೃತ್ವದಲ್ಲಿ ಇಂತಹ ಮತ್ತಷ್ಟು ಉತ್ತಮ ಕಾರ್ಯಗಳು ನಡೆಯಲಿ ಎಂದರು.

ಕಾರ್ಯಕ್ರಮದಲ್ಲಿ,ಮಹಿಳಾ ಮುಖಂಡರಾದ ಪುಷ್ಪ ಶಿವಶಂಕರ್, ನಗರ ಮಂಡಲ ಅಧ್ಯಕ್ಷ ಮುದ್ದಣ್ಣ, ತಾಲ್ಲೂಕು ಮಂಡಲ ಅಧ್ಯಕ್ಷ ನಾಗೇಶ್, ನಗರ ಸಭೆ ಅಧ್ಯಕ್ಷರಾದ ಸುಮಿತ್ರಾ ಆನಂದ್,ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ ಸಿ ನಾರಾಯಣ ಸ್ವಾಮಿ, ಬಮುಲ್ ನಿರ್ದೇಶಕರಾದ ಬಿ ಸಿ ಆನಂದ್, ಮುಖಂಡ ಟಿ. ರಂಗರಾಜು, ನಗರಸಭಾ ಸದಸ್ಯರಾದ ಬಂತಿ ವೆಂಕಟೇಶ್ ,ನಾಗರತ್ನಮ್ಮ ದರ್ಗಾಜೋಗಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನಾಗರಾಜ್ , ವಾಣಿ ನಂದಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

- Advertisement -  - Advertisement - 
Share This Article
error: Content is protected !!
";