ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ನಗರದ ಬಿ.ಡಿ.ರಸ್ತೆಯಲ್ಲಿರುವ ಜಿಲ್ಲಾ ಒಕ್ಕಲಿಗರ ಸಂಘದಲ್ಲಿ ಫೆ.13 ರ ಇಂದು ಬೆಳಿಗ್ಗೆ ೧೧ ಕ್ಕೆ ಸಮುದಾಯ ಭವನದ ಡೈನಿಂಗ್ ಹಾಲ್ ಉದ್ಘಾಟನೆ ಹಾಗೂ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಆದಿಚುಂಚನಗಿರಿಯ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಮುದಾಯ ಭವನದ ಡೈನಿಂಗ್ ಹಾಲ್ ಉದ್ಘಾಟಿಸುವರು. ಡಾ.ನಂಜಾವಧೂತ ಮಹಾಸ್ವಾಮಿಗಳು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ.
ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಪಿ.ಚೇತನ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್,
ಸಂಸದ ಗೋವಿಂದ ಎಂ.ಕಾರಜೋಳ, ಶಾಸಕರುಗಳಾದ ಕೆ.ಸಿ.ವೀರೇಂದ್ರಪಪ್ಪಿ, ಟಿ.ರಘುಮೂರ್ತಿ, ಎಂ.ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಕೆ.ಎಸ್.ನವೀನ್, ಚಿದಾನಂದ ಎಂ.ಗೌಡ, ಡಿ.ಟಿ.ಶ್ರೀನಿವಾಸ್, ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಮಾಜಿ ಸಚಿವ ಹೆಚ್.ಆಂಜನೇಯ ಇವರುಗಳು ಭಾಗವಹಿಸಲಿದ್ದಾರೆಂದು ಜಿಲ್ಲಾ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಜಗನ್ನಾಥ ತಿಳಿಸಿದ್ದಾರೆ.

