ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕು ಮಟ್ಟದ ಯುವ ಚಿಲುಮೆ – 24 ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗು ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಹಮ್ಮಿಕೂಳ್ಳಲಾಗಿತ್ತು.
ನಗರದ ಹೊರವಲಯದ ಮಾದಗೊಂಡಹಳ್ಳಿ ಪದವಿ ಪೂರ್ವ ಕಾಲೇಜ್ ಅ ಯೋಜನೆ ಮಾಡಲಾದ ಕಾರ್ಯಕ್ರಮದಲ್ಲಿ. ಶಾಸಕ ಧೀರಜ್ ಮುನಿರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೈಹಿಕ ತರಬೇತಿಯ ಜೊತೆಗೆ ಮಾನಸಿಕ ತರಬೇತಿಯು ಬಹಳ ಮುಖ್ಯ ಎಂದು ತಿಳಿಸಿದರು ತಾಲ್ಲೂಕಿನ ಎಲ್ಲಾ ಕಾಲೇಜುಗಳ ಈ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿರುವುದು ತುಂಬಾ ಸಂತೋಷ ವಿಷಯ ಮುಂದಿನ ಶೈಕ್ಷಣಿಕ ವರ್ಷದಿಂದ ಪದವಿ ಕಾಲೇಜುಗಳಲ್ಲು ಈ ತರಹದ ಸಾಂಸ್ಕೃತಿಕ ಹಬ್ಬವನ್ನು ಆಚರಣೆ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಯುವ ಚಿಲುಮೆ,- 24 ಸಾಂಸ್ಕೃತಿಕ ಹಬ್ಬದಲ್ಲಿ ತಾಲ್ಲೂಕಿನಲ್ಲಿ 12 ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಶ್ರೀ ವಾಣಿ ಕಾಲೇಜು ಪ್ರಥಮ ಸ್ಥಾನವನ್ನು ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಮತ್ತು ಶ್ರೀ ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಒಟ್ಟಾರೆ ಪದಕಗಳ ಪಟ್ಟಿಯಲ್ಲಿ ತೃತೀಯ ಸ್ಥಾನ ಪಡೆದು ಕೊಂಡರು.
ವೈಯಕ್ತಿಕ ವಿಭಾಗದಲ್ಲಿ ಚಲನಚಿತ್ರ ಗೀತಾ ಗಾಯನ ಸ್ಪರ್ಧೆಯಲ್ಲಿ ಶ್ರೀ ವಾಣಿ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಕುಮಾರಿ ಮೃದುಲ ಎಂ ಸಿ ಮಂಜುನಾಥ್ ಪ್ರಥಮ ಸ್ಥಾನ ಜಾನಪದ ಗೀತ ಗಾಯನ ಸ್ಪರ್ಧೆಯಲ್ಲಿ ಅದೇ ಕಾಲೇಜಿನ ಕುಮಾರಿ ಅಕ್ಷತಾ ಟಿ ನಾಯಕ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ವಿಜೇತರಿಗೆ ಬಹುಮಾನ ವಿತರಣಾ ಮಾಡಲಾಯಿತು. ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ನಗರಸಭಾ ಸದಸ್ಯ ಎಸ್ ಪದ್ಮನಾಭ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುನೀತಾ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳಾದ ಎಂ ಸಿ ಮಂಜುನಾಥ್ ಆನಂದಮೂರ್ತಿ ಎನ್ ಬಿಆರ್ ವೇಣುಗೋಪಾಲ್ ಮಹಾಂತೇಶ್ ವಿವಿಧ ಕಾಲೇಜುಗಳ ಉಪನ್ಯಾಸಕರು ತೀರ್ಪುಗಾರರು ವಿದ್ಯಾರ್ಥಿಗಳು ಭಾಗವಹಿಸಿದ್ದರು.