ಪೂರ್ವಭಾವಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಶಿಕ್ಷಕರು ಸೇರಿ 8 ಆರೋಪಿಗಳ ಬಂಧನ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎಸ್ಎಸ್ಎಲ್‌ಸಿ ಪೂರ್ವಭಾವಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದಡಿ ಶಿಕ್ಷಕರು ಸೇರಿದಂತೆ ಕೆಲ ಆರೋಪಿಗಳನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಗಳ ವಿವಿಧ ಶಾಲೆಗಳ ಶಿಕ್ಷಕರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಕೆಲವು ಶಾಲೆಗಳ ಮುಖ್ಯ ಶಿಕ್ಷಕರು ಸಹ ಇದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement - 

ಎಸ್ಎಸ್ಎಲ್‌ಸಿಯ ಪೂರ್ವಭಾವಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಇತ್ತೀಚಿಗೆ ಪತ್ತೆಯಾಗಿತ್ತು. ಸಮಾಜ ವಿಜ್ಞಾನ, ಇಂಗ್ಲಿಷ್, ಹಿಂದಿ ಪ್ರಶ್ನೆ ಪತ್ರಿಕೆಗಳು ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ಈ ಸಂಬಂಧ ನೀಡಿದ ದೂರಿನನ್ವಯ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ತನಿಖೆ ನಡೆಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ದೃಢಪಟ್ಟಿತ್ತು. ವೈರಲ್ ಮಾಡಲಾಗಿದ್ದ ಖಾತೆಗಳ ವಿವರ ಹಾಗೂ ಮಾಹಿತಿಗಳನ್ನು ಆಧರಿಸಿ 8 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳು ಖಚಿತಪಡಿಸಿದ್ದಾರೆ.

- Advertisement - 

ಕೆಲವು ಮಾಹಿತಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದ್ದು, ಯಾರ ಪಾತ್ರ ಏನು ಎಂದು ವಿಚಾರಣೆ ನಡೆಸಲಾಗುತ್ತಿದೆ. ಪ್ರಶ್ನೆ ಪತ್ರಿಕೆಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಂಡವರೂ ಸಹ ಈ ಪ್ರಕರಣದಲ್ಲಿ ಹೊಣೆಗಾರರಾಗುತ್ತಾರೆ. ಅವರನ್ನೂ ಸಹ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

2025-26ನೇ ಸಾಲಿನ ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು ಪರೀಕ್ಷೆ 2ರ ಅಂತಿಮ ವೇಳಾಪಟ್ಟಿಯನ್ನು ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
2026ರ ಮಾರ್ಚ್​ 18ರಿಂದ ಏಪ್ರಿಲ್​ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆ 1ರ ಎಕ್ಸಾಮ್ಸ್​ ನಡೆಯಲಿವೆ.

ಪಿಯುಸಿ ಪರೀಕ್ಷೆ 1ರ ಪರೀಕ್ಷೆ 2026ರ ಫೆಬ್ರುವರಿ 28ರಿಂದ ಮಾರ್ಚ್​ 17ರ ವರೆಗೆ ನಡೆದರೆ, ಪರೀಕ್ಷೆ 2ರ ಪರೀಕ್ಷೆ ಏಪ್ರಿಲ್​ 25ರಿಂದ ಮೇ 9ರ ವರೆಗೆ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

 

Share This Article
error: Content is protected !!
";