ಚಂದ್ರವಳ್ಳಿ ನ್ಯೂಸ್, ಚಿಕ್ಕಮಗಳೂರು:
ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಕಾರ್ಯಾಲಯ ಪಾಂಚಜನ್ಯದಲ್ಲಿ ಮುಂಬರಲಿರುವ ವಿವಿಧ ಸಹಕಾರಿ ಸಂಘಗಳ ಚುನಾವಣೆಗೆ ಸಂಬಂಧಿಸಿದಂತೆ, ವಿವಿಧ ಬ್ಯಾಂಕುಗಳ ಮತ್ತು ಸಹಕಾರಿ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ನಿರ್ದೇಶಕರುಗಳೊಂದಿಗೆ ಪೂರ್ವಭಾವಿ ಸಮಾಲೋಚನಾ ಸಭೆ ನಡೆಸಲಾಯಿತು ಎಂದು ಬಿಜೆಪಿ ನಾಯಕ, ವಿಪ ಸದಸ್ಯ ಸಿ.ಟಿ ರವಿ ತಿಳಿಸಿದರು.
ಈ ಸಂದರ್ಭದಲ್ಲಿ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ, ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ, ಹಿರಿಯ ನಾಯಕರಾದ ಕೋಟೆ ರಂಗಣ್ಣ, ಪ್ರೇಮ್ ಕುಮಾರ್ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿದ್ದರು.