ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಕೇಂದ್ರದಲ್ಲಿ ಫೆ.01ರಂದು ಮಡಿವಾಳ ಮಾಚಿದೇವ ಜಯಂತಿ ಹಾಗೂ ಫೆ.05 ರಂದು ಸವಿತಾ ಮಹರ್ಷಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಡಿವಾಳ ಮಾಚಿದೇವ ಜಯಂತಿಯನ್ನು ಫೆ.01ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಾಗೂ ಸವಿತಾ ಮಹರ್ಷಿ ಜಯಂತಿಯನ್ನು ಫೆ.05 ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಒಪ್ಪಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಉಭಯ ಮಹನೀಯರ ಜಯಂತಿಯನ್ನು ಸರ್ಕಾರದ ಶಿಷ್ಟಾಚಾರ ಪಾಲಿಸಿಕೊಂಡು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಮಹನೀಯರ ಜಯಂತಿ ಅಂಗವಾಗಿ ಗೀತಗಾಯನ ಹಾಗೂ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ, ಆಹ್ವಾನಿಸಲಾಗುವುದು ಎಂದು ಹೇಳಿದರು.
ಮಡಿವಾಳ ಸಮಾಜದ ಜಿಲ್ಲಾ ಅಧ್ಯಕ್ಷ ಬಿ.ರಾಮಪ್ಪ ಮಾತನಾಡಿ, ಚಿತ್ರದುರ್ಗ ನಗರದ ಯಾವುದಾದರೂ ವೃತ್ತಕ್ಕೆ ಮಡಿವಾಳ ಮಾಚಿದೇವರ ಹೆಸರನ್ನು ನಾಮಕರಣ ಮಾಡುವಂತೆ ಜಿಲ್ಲಾಡಳಿತಕ್ಕೆ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಸವಿತಾ ಮಹರ್ಷಿ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಡಿ. ಕುಮಾರ್ ಮಾತನಾಡಿ, ಸವಿತಾ ಸಮಾಜ ಪರಿಶಿಷ್ಟ ಜಾತಿಗೆ ಸೇರಲು ಅರ್ಹತೆ ಹೊಂದಿದ್ದು, ಸವಿತಾ ಸಮಾಜಕ್ಕೆ ಪರಿಶಿಷ್ಟ ಜಾತಿಯ ಸ್ಥಾನಮಾನ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್ ಅವರು, ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿgಐ ಕಚೇರಿ ತಹಶೀಲ್ದಾರ್ ಸಿದ್ದೇಶ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಮಡಿವಾಳ ಸಮಾಜದ ಮಂಜುನಾಥ್, ಲಕ್ಷ್ಮಣ್, ರಂಗಸ್ವಾಮಿ, ಪುರುಷೋತ್ತಮ್, ಪ್ರಕಾಶ್, ಮಾಚಿದೇವ ದೇವಸ್ಥಾನ ಸಮಿತಿಯವರಾದ ಶಿವಣ್ಣ,
ರುದ್ರೇಶ್, ರಂಗಸ್ವಾಮಿ, ಪರಶುರಾಮ್, ಹಿರಿಯ ಮುಖಂಡ ಗೋಪಾಲಣ್ಣ, ಜಿಲ್ಲಾ ಸವಿತಾ ಸಮಾಜದ ಸಾಯಿನಾಥ್, ಎನ್.ಶ್ರೀನಿವಾಸ್, ಆರ್.ಶ್ರೀನಿವಾಸ್, ನಾಗರಾಜ್, ಸಂತೋಷ್, ರಂಜಿತ್, ಪ್ರಸನ್ನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.