ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯನ್ನು ಜನಸಂಖ್ಯಾ ಆಧಾರದ ಮೇಲೆ ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು ನಂತರ ಪಟ್ಟಣ ಪಂಚಾಯಿತಿಯಾಗಿ ನೂತನವಾಗಿ ರಚನೆಯಾದ ನಂತರ ಪ್ರಥಮ ಬಾರಿಗೆ ನಡೆಯಲಿರುವ ಚುನಾವಣೆಯ ಸಿದ್ಧತೆಗಳು ಅಂತಿಮ ಹಂತಕ್ಕೆ ಬಂದಿದೆ.
ಜಾತಿ ಅಧಾರದ ಮೇಲೆ ಮೀಸಲಾಯಿತು ಪಟ್ಟಿ ಬಿಡುಗಡೆ ಗೊಂಡ ನಂತರ ರಾಜಕೀಯ ಪಕ್ಷಗಳ ಸಭೆಯಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲಾಯಿತು.
ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರು ಸಭೆಯಲ್ಲಿ ಮಾತನಾಡಿ, ಅ. 30 ರಂದು ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕವಾಗಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಎಲ್ಲ ಆಕ್ಷೇಪಣೆಗಳು ಹಾಗೂ ತಿದ್ದುಪಡಿ ಮನವಿಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ 19 ವಾರ್ಡ್‌ಗಳ ಮತದಾರರ ಪಟ್ಟಿಯ ಪ್ರಕಾರ ಒಟ್ಟು 12,769 ಮತದಾರರು ದಾಖಲಾಗಿದ್ದು, ಅವರಲ್ಲಿ 6,540 ಪುರುಷರು ಮತ್ತು 6,229 ಮಹಿಳೆಯರು ಸೇರಿದ್ದಾರೆ. ಅಂತಿಮ ಪಟ್ಟಿಯನ್ನು ಪಟ್ಟಣ ಪಂಚಾಯಿತಿ ಕಾರ್ಯಾಲಯ ಮತ್ತು ತಾಲ್ಲೂಕು ಕಛೇರಿಯಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗಿದೆ.
ರಾಜ್ಯ ಚುನಾವಣಾ ಆಯೋಗವು ಈಗಾಗಲೇ ವಾರ್ಡ್‌ಗಳ ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಣೆ ಮಾಡಿದ್ದು, ನ್ಯಾಯಾಲಯದಲ್ಲಿದ್ದ ವಿವಾದಗಳು ಇತ್ತೀಚೆಗೆ ಇತ್ಯರ್ಥಗೊಂಡಿವೆ. ಹೀಗಾಗಿ ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.
ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಹಿನ್ನೆಲೆಯಲ್ಲಿ, ಚುನಾವಣೆಯ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚುನಾವಣೆಗೆ ಸ್ವರ್ದಿಗೆ ಮೂರು ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿ ಅಂತಿಮ ಗೂಳಿಸಲು ಸಭೆಗಳ ನಡೆಸಲಾಗುತ್ತಿದೆ. ಇದರ ಜೊತೆಯಲ್ಲಿ ಪಕ್ಷೇತ್ರ ಅಭ್ಯರ್ಥಿಗಳು ಸಹ ಚುನಾವಣೆಯಲ್ಲಿ ಸ್ಪರ್ಧಿಸಲು ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ.

